ಜಿಲ್ಲಾಧಿಕಾರಿಯಾಗಿ ಬಿ.ಫೌಜಿಯಾ ತರನ್ನುಮ್ ಅಧಿಕಾರ ಸ್ವೀಕಾರ

ಕಲಬುರಗಿ,ಜೂ.21: ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ 2015ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ಕರ್ನಾಟಕ ಲೋಕಸೇವಾ ಆಯೋಗದ ನಿಯಂತ್ರಕಿಯಾಗಿದ್ದ ಬಿ.ಫೌಜಿಯಾ ತರನ್ನುಮ್ ಅವರನ್ನು ಕಲಬುರಗಿ ಜಿಲ್ಲಾಧಿಕಾರಿಯನ್ನಾಗಿ ವರ್ಗಾಯಿಸಿ ಸೋಮವಾರವμÉ್ಟ ಸರ್ಕಾರ ಆದೇಶ ಹೊರಡಿಸಿತ್ತು.
ಬಿ.ಫೌಜಿಯಾ ತರನ್ನುಮ್ ಈ ಹಿಂದೆ ಜಿಲ್ಲೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.