ಜಿಲ್ಲಾಧಿಕಾರಿಯಿಂದ ಕ್ಯಾಲೆಂಡರ್ ಬಿಡುಗಡೆ

ಗದಗ,ಜ2: ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ವತಿಯಿಂದ ಮಗಳನ್ನು ಉಳಿಸಿ, ಮಗಳನ್ನು ಓದಿಸಿ ಕಾರ್ಯಕ್ರಮದ 2021ನೇ ಸಾಲಿನ ಕ್ಯಾಲೆಂಡರ್‍ನ್ನು ಜಿಲ್ಲಾಧಿಕಾರಿ ಎಂ.ಸುಂದೇಶಬಾಬು ಬಿಡುಗಡೆ ಮಾಡಿದರು
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ.ಕೆ. ಬಿತ್ತಿ ಪತ್ರ, ಕರಪತ್ರ ಮತ್ತು ಸ್ಟಿಕರ್‍ಗಳನ್ನು ಬಿಡುಗಡೆ ಮಾಡಿದರು, ಇದೇ ಸಂದರ್ಭದಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯ ಕರಪತ್ರಗಳನ್ನು ಕೂಡಾ ಬಿಡುಗಡೆಗೊಳಿಸಲಾಯಿತು. ಇದರೊಂದಿಗೆ ತಿತಿತಿ.ತಿಛಿಜgಚಿಜಚಿg.bಟogsಠಿoಣ.ಛಿom ಬ್ಲಾಗ್ ಸ್ಪಾಟ್ ವೆಬಸೈಟ್‍ನ್ನು ಅನಾವರಣಗೊಳಿಸಿ ಇಲಾಖೆಯ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸರ್ವಸಿಬ್ಬಂದಿಗಳಿಗೆ ತಿಳಿಸಿದರು. ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಗಳಲ್ಲಿ ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆಯ ಧ್ವನಿ ಮುದ್ರಿಕೆಯನ್ನು ಬಿತ್ತರಗೊಳಿಸಲು ಚಾಲನೆ ನಿಡಲಾಯಿತು. ಕೊನೆಯದಾಗಿ ಸರ್ವರಿಗೂ ಹೊಸ ವರ್ಷದ ಶುಭಾಶಯಗಳನ್ನು ಕೋರಿದರು.
ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಉಪ ನಿರ್ದೇಶಕ ಉಸ್ಮಾನ್.ಎ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಹೆಚ್.ಹೆಚ್.ಕುಕನೂರ,ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಅವಿನಾಶ.ಗೋಟಖಿಂಡಿ . ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಅಧಿಕಾರಿ ಪುಟ್ಟಸ್ವಾಮಿ ಭಾಗವಹಿಸಿದ್ದರು.ಹೆಚ್.ಹೆಚ್.ಕುಕನೂರ ಜಿಲ್ಲಾ ನಿರೂಪಣಾಧಿಕಾರಿಗಳು ವಂದಿಸಿದರು.