ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಂದ ನೂತನ ಕೇಂದ್ರ ಕಾರಾಗೃಹ ಕಾಮಗಾರಿ ಪರಿಶೀಲನೆ

ಸಂಜೆವಾಣಿ ವಾರ್ತೆ,
ವಿಜಯಪುರ :ಡಿ.3: ಸಮೀಪದ ಅರಕೇರಿ ಗ್ರಾಮದ ಹತ್ತಿರ ನಿರ್ಮಾಣವಾಗುತ್ತಿರುವ ನೂತನ ಕೇಂದ್ರ ಕಾರಾಗೃಹದ ಕಾಮಗಾರಿ ಸ್ಥಳಕ್ಕೆ ಭೇಟಿ ಶುಕ್ರವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನೂತನ ಕೇಂದ್ರ ಕಾರಾಗೃಹಕ್ಕೆ ಭೂತನಾಳ ಕೆರೆಯಿಂದ ನೀರಿನ ಸೌಲಭ್ಯವನ್ನು ಒದಗಿಸುವ 650.00 ಲಕ್ಷಗಳ ಅಂದಾಜು ವೆಚ್ಚದ ಪ್ರಸ್ತಾವನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅವರು, ನೂತನ ಕೇಂದ್ರ ಕಾರಾಗೃಹದ ಕಾಮಗಾರಿಗಳ ಎಲ್ಲ ವಿಭಾಗಗಳ ವೀಕ್ಷಣೆ ನಡೆಸಿ, ಕಾರಾಗೃಹದ ಹೊರವೃತ್ತದ ಸುತ್ತುವರಿಗೆ ತೆರಳಿ ಭದ್ರತಾ ಗೋಡೆಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಕಾರಾಗೃಹ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಅಭಿಯಂತರರು ಉಪಸ್ಥಿತರಿದ್ದರು.