ಜಿಲ್ಲಾಧಿಕಾರಿ ಭೇಟಿ

ಲಕ್ಷ್ಮೇಶ್ವರ,ಮಾ3: ತಾಲೂಕಿನ ಯಳವತ್ತಿ ಪು ಬಡ್ನಿ ಸೂರಣಗಿ ನಾದಿಗಟ್ಟಿ ಮತ್ತು ಲಕ್ಷ್ಮೇಶ್ವರರ ಅನೇಕ ಮತಗಟ್ಟೆ ಕೇಂದ್ರಗಳಿಗೆ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂಎಲ್ ಮತ್ತು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಬಿಎಸ್ ನೇಮಗೌಡ ಅವರು ಭೇಟಿ ನೀಡಿ ಪರಿಶೀಲಿನ ನಡೆಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಪರುಶುರಾಮ ಸತ್ತಿಗೇರಿ ಅವರಿಗೆ ತಹಶೀಲ್ದಾರರು ಸಲಹೆ ಸೂಚನೆಗಳನ್ನು ನೀಡಿ ಯಾವ ಯಾವ ಭೂತಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಇದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿದರು.
ಅದೇ ರೀತಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳು ಸಿಪಿಐ ವಿಕಾಸ ಲಮಾಣಿ ಮತ್ತು ಪಿಎಸ್‍ಐ ಡಿ ಪ್ರಕಾಶ ಅವರುಗಳಿಗೆ ಎಲ್ಲೆಲ್ಲಿ ಸೂಕ್ಷ್ಮ ಮತಗಟ್ಟೆಗಳಿವೆ ಅತಿ ಸೂಕ್ಷ್ಮ ಮತಗಟ್ಟೆಗಳಿವೆ ಎಂಬುದನ್ನು ಗುರುತಿಸಿ ಅಲ್ಲಿ ಕೈಗೊಳ್ಳಬೇಕಾದ ಕಾನೂನು ಸುವ್ಯವಸ್ಥೆ ಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಅಧಿಕಾರಿ ಶಂಕರ್ ಹುಲ್ಲಮ್ಮನವರ್ ಕಂದಾಯ ನಿರೀಕ್ಷಕ ಬಸವರಾಜ ಕಾತ್ರಾಳ ಸೇರಿದಂತೆ ಆಯಾ ಗ್ರಾಮಗಳ ಗ್ರಾಮ ಪಂಚಾಯಿತಿ ಪಿಡಿಒ ಗ್ರಾಮ ಆಡಳಿತಗಾರರು ಮತ್ತು ಸಿಬ್ಬಂದಿ ವರ್ಗದವರು ಇದ್ದರು.