ಜಿಲ್ಲಾಧ್ಯಕ್ಷರ ನೇಮಕ

ಕೋಲಾರ,ಏ. ೧- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಕ್ಷಕರ ಘಟಕದ ಜಿಲ್ಲಾಧ್ಯಕ್ಷರಾಗಿ ಶ್ರೀನಿವಾಸಪುರ ತಾಲೂಕಿನ ಗಾಂಡ್ಲಹಳ್ಳಿ ಗ್ರಾಮದ ನಿವಾಸಿ ನಿವೃತ್ತ ಮುಖ್ಯ ಶಿಕ್ಷಕ ಕೆ.ಹೆಚ್.ಸಂಪತ್‌ಕುಮಾರ್ ನೇಮಕಗೊಂಡಿದ್ದಾರೆ.
ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯ ಮೇರೆಗೆ ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶಿಸಲಾಗಿದೆ.
ಕೂಡಲೇ ತಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ಸ್ಥಳೀಯ ನಾಯಕರ ಸಹಯೋಗದಲ್ಲಿ ಶಿಕ್ಷಕರ ಘಟಕದ ಪಕ್ಷ ಸಂಘಟನೆ ಮತ್ತಯ ಬಲವರ್ಧನೆಗೆ ಶ್ರಮಿಸಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಕ್ಷಕರ ಘಟಕದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ ಸೂಚಿಸಿದ್ದಾರೆ.
ಕೆ.ಹೆಚ್.ಸಂಪತ್‌ಕುಮಾರ್ ಅವರಿಗೆ ಆದೇಶ ಪತ್ರ ನೀಡುವ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ರಾಮೋಜಿಗೌಡ, ಉಪಾಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ, ಕೆ.ಪಿ.ಸಿ.ಸಿ.ಸದಸ್ಯ ಸಲೀಂ ಅಹಮ್ಮದ್ ಉಪಸ್ಥಿತರಿದ್ದರು.