ಭಾಲ್ಕಿ:ಸೆ.26:ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ಪ್ರಾಥಮಿಕ, ಪ್ರೌಢ ಶಾಲೆಯ ಕ್ರೀಡಾಪಟುಗಳು ತಾಲ್ಲೂಕು ಮಟ್ಟದ ವೈಯಕ್ತಿಕ ಹಾಗೂ ಗುಂಪು ಆಟದ ವಿವಿಧ
ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾದರು.
ವಿವರ: ಪ್ರಾಥಮಿಕ ವಿಭಾಗದ ಗುಂಪು ಆಟಗಳಾದ ಬಾಲಕರ ಕೊಕ್ಕೊ, ಬಾಲಕ, ಬಾಲಕಿಯರ ಬಾಲ್ ಬ್ಯಾಡ್ಮಿಂಟನ್, ರಿಲೇಯಲ್ಲಿ, ವೈಯಕ್ತಿಕ ವಿಭಾಗದ ಎತ್ತರ ಜಿಗಿತದಲ್ಲಿ ಪ್ರಥಮ ಕಿಶನ್ ಪ್ರಥಮ ಸ್ಥಾನ ಪಡೆದಿದ್ದಾರೆ. ಉದ್ದ ಜಿಗಿತ, ತ್ರಿವಿಧ ಜಿಗಿತದಲ್ಲಿ ವಿನೋದ ದ್ವಿತೀಯ ಸ್ಥಾನ ಪಡೆದಿದ್ದಾನೆ. ಪ್ರೌಢ ವಿಭಾಗದ ಬಾಲಕಿಯರ ರಿಲೆಯಲ್ಲಿ ಪ್ರಥಮ ಸ್ಥಾನ, 800 ಮೀ. ಓಟದಲ್ಲಿ ಸುಮಿತ್ ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಹಿರೇಮಠ ಸಂಸ್ಥಾನ ವಿದ್ಯಾಪೀಠದ ಸಂಸ್ಥಾಪಕ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ, ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಮುಖ್ಯಶಿಕ್ಷಕ ಮಹೇಶ ಮಹಾರಾಜ್, ಮಹೇಶ ಕುಲಕರ್ಣಿ, ಎಸ್ಸೆಸ್ಸೆಲ್ಸಿ ಸಂಯೋಜಕ ಪ್ರವೀಣಕುಮಾರ ಖಂಡಾಳೆ, ದೈಹಿಕ ನಿರ್ದೇಶಕ ಅನಿಲ್‍ಕುಮಾರ ಪಾಟೀಲ, ಯಲ್ಲಾಲ್ಲಿಂಗ ಝಳಕೆ, ಮಲ್ಲಪ್ಪ ಎಂ., ಶರಣಬಸವ ಸೇರಿದಂತೆ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.