ಜಿಲ್ಲಾಮಟ್ಟದ ಗ್ರಾಮ ಸ್ವಾವಲಂಬಿ ಸಮಾವೇಶ ಮುಂದಕ್ಕೆ

????????????????????????????????????

ಬೀದರ್:ಸೆ.8: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘವು ಹುಮನಾಬಾದ್ ತಾಲ್ಲೂಕಿನ ಮಾಣಿಕನಗರದಲ್ಲಿ ಯುವಕ, ಯುವತಿಯರಿಗಾಗಿ ಸೆ. 9 ರಂದು ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಗ್ರಾಮ ಸ್ವಾವಲಂಬಿ ಸಮಾವೇಶವನ್ನು ಒಂದು ದಿನ ಮುಂದೂಡಲಾಗಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನದ ಪ್ರಯುಕ್ತ ರಾಜ್ಯ ಸರ್ಕಾರ ಘೋಷಿಸಿರುವ ಶೋಕಾಚರಣೆ ಹಿನ್ನೆಲೆಯಲ್ಲಿ ಸಮಾವೇಶ ಮುಂದೂಡಲಾಗಿದೆ ಎಂದು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ರೇವಣಸಿದ್ದಪ್ಪ ಜಲಾದೆ ತಿಳಿಸಿದ್ದಾರೆ.

ಹುಮನಾಬಾದ್, ಚಿಟಗುಪ್ಪ, ಬಸವಕಲ್ಯಾಣ ಹಾಗೂ ಹುಲಸೂರು ತಾಲ್ಲೂಕುಗಳ ಯುವಕ, ಯುವತಿಯರಿಗೆ ಮಾಣಿಕನಗರದ ನಿಗದಿತ ಸ್ಥಳದಲ್ಲೇ ಸೆ. 10 ರಂದು ಬೆಳಿಗ್ಗೆ 10ಕ್ಕೆ ಸಮಾವೇಶ ನಡೆಯಲಿದೆ ಎಂದು ಹೇಳಿದ್ದಾರೆ.

ಸಂಘದ ಅಧ್ಯಕ್ಷ ಡಾ. ಬಸವರಾಜ ಪಾಟೀಲ ಸೇಡಂ, ಜನಪ್ರತಿನಿಧಿಗಳು, ಸಂಪನ್ಮೂಲ ವ್ಯಕ್ತಿಗಳು, ಗಣ್ಯರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.