ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ತಾಯಿಮಕ್ಕಳ ಆಸ್ಪತ್ರೆಗೆ ಚಾಲನೆ

ಧಾರವಾಡ, ಮೇ.3: ಧಾರವಾಡ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಕೇಂದ್ರ ಸರ್ಕಾರದ ನಗರ ಆರೋಗ್ಯ ಅಭಿಯಾನದ ಅನುದಾನದಲ್ಲಿ ನಿರ್ಮಾಣಗೊಂಡಿರುವ 100 ಹಾಸಿಗೆಗಳ ಸೌಲಭ್ಯವಿರುವ ತಾಯಿ ಮಕ್ಕಳ ಆಸ್ಪತ್ರೆಗೆ ಕೇಂದ್ರ ಗಣಿ, ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹಾಗೂ ಬೃಹತ್, ಮಧ್ಯಮ ಕೈಗಾರಿಕೆಗಳ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯಶವಂತ ಮದೀನಕರ, ಡಿಮಾನ್ಸ್ ನಿರ್ದೇಶಕ ಡಾ. ಮಹೇಶ ದೇಸಾಯಿ ಸೇರಿದಂತೆ ವಿವಿಧ ವೈದ್ಯರು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆಯಿಂದಾಗಿ ಕೋರೊನಾ ಸಕ್ರಿಯ ಪ್ರಕರಣಗಳು ಹೆಚ್ಚುತ್ತಿವೆ. ನೂತನವಾಗಿ ನಿರ್ಮಿಸಿರುವ ಈ ಆಸ್ಪತ್ರೆಯನ್ನು ಜಿಲ್ಲಾಡಳಿತವು ಕೋವಿಡ್ ಚಿಕಿತ್ಸೆಗೆ ಬಳಸಲಿದ್ದು, ಉಸ್ತುವಾರಿಯಾಗಿ ಡಿಮಾನ್ಸ್ ನಿರ್ದೇಶಕ ಡಾ.ಮಹೇಶ ದೇಸಾಯಿ ಹಾಗೂ ದಿನದ 24 ಗಂಟೆ ನಿರಂತರವಾಗಿ ಸರದಿಯಂತೆ ಕರ್ತವ್ಯ ನಿರ್ವಹಿಸಲು ವಿವಿಧ ಸರ್ಕಾರಿ ವೈದ್ಯರನ್ನು ನೇಮಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಆದೇಶಿಸಿದ್ದಾರೆ.