ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪ್ರವಾಸ

ಕಲಬುರಗಿ:ಜ.23:ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಪಂಕಜ್ ಕುಮಾರ್ ಪಾಂಡೆ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜನವರಿ 24 ರಂದು ಬೆಳಿಗ್ಗೆ 9.35 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಕಲಬುರಗಿ ಜೆಸ್ಕಾಂ ನಿಗಮದ ಕಚೇರಿಯಲ್ಲಿ ಗುಲಬರ್ಗಾ ವಿದ್ಯುತ್ ಸರಬರಾಜು ನಿಗಮ ನಿಯಮಿತ/ ಕಲಬುರಗಿ ಪ್ರಸರಣ ವಲಯದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು.
ಮಧ್ಯಾಹ್ನ 12 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರ ಮತ್ತು ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಜರುಗುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 3 ಗಂಟೆಗೆ ಕಲಬುರಗಿಯಿಂದ ಬೆಂಗಳೂರಿಗೆ ಪ್ರಯಾಣಿಸುವರು.