ಜಿಲ್ಲಾ ಉಸ್ತುವಾರಿ ಸಚಿವರಿಂದ ಭುವನೇಶ್ವರಿಪೂಜೆ ಹಾಗೂ ರಾಜ್ಯೋತ್ಸವದ ಧ್ವಜಾರೋಹಣ

ಕಲಬುರಗಿ,ಅ.30:ಕಲಬುರಗಿಯ ನೆಹರು ಗಂಜಿನ ಶ್ರೀ ನಗರೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾದ 68ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ದಿನವಾದ ನವೆÀಂಬರ್ 1ರಂದು ಬುಧವಾರ ಬೆಳಗಿನ 9 ಗಂಟೆಗೆ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ನಾಡದೇವತೆ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಹಾಗೂ ಧ್ವಜಾರೋಹಣವನ್ನು ನೆರÀವೇರಿಸುವರು.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ಹಾಗೂ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಹಾಗೂ ಬೀದರ ಸಂಸದರಾದ ಭಗವಂತ ಖೂಬಾ ಗೌರವ ಉಪಸ್ಥಿತಿವಹಿಸುವರು.

ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಲಬುರಗಿ ಲೋಕಸಭಾ ಸದಸ್ಯ ಡಾ.ಉಮೇಶ ಜಿ. ಜಾಧವ, ಶಾಸಕರುಗಳಾದ ಬಿ.ಆರ್.ಪಾಟೀಲ, ಎಂ.ವೈ. ಪಾಟೀಲ, ಕನೀಜ್ ಫಾತೀಮಾ, ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ, ಅಲ್ಲಮಪ್ರಭು ಪಾಟೀಲ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ಸಾಬಣ್ಣ ತಳವಾರ, ತಿಮ್ಮಣ್ಣಪ್ಪ ಕಮಕನೂರ ಹಾಗೂ ಮಹಾನಗರ ಪಾಲಿಕೆ ಮಹಾಪೌರ ವಿಶಾಲ ಎಸ್. ದರ್ಗಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಅಜಯ ಹಿಲೋರಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಎಂ. ಸುಂದರೇಶ ಬಾಬು ಹಾಗೂ ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ್ ಎಸ್. ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.