ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ,ಆ.15: ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ ನವೀಕರಣ ಮಾಡಲಾದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯನ್ನು ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದರು.
ಶಾಸಕ ಅಲ್ಲಮಪ್ರಭು ಪಾಟೀಲ, ಎಂ.ಎಲ್.ಸಿ.ತಿಪ್ಪಣಪ್ಪ ಕಮಕನೂರ, ಚಂದ್ರಶೇಖರ ಪಾಟೀಲ ಹುಮನಾಬಾದ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಕಲಬುರಗಿ ನಗರ ಪೆÇಲೀಸ್ ಆಯುಕ್ತ ಚೇತನ ಆರ್., ಎಸ್.ಪಿ. ಇಶಾ ಪಂತ್, ಜಿಲ್ಲಾ ಪಂಚಾಯತ್ ಸಿ.ಇ.ಒ ಡಾ.ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್ ಇದ್ದರು.