ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಕಲಬುರಗಿ:ಡಿ.1:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಬೀದರ ಜಿಲ್ಲೆಯ ಭಾಲ್ಕಿಯಿಂದ ರಸ್ತೆ ಮೂಲಕ ಡಿಸೆಂಬರ್ 2 ರಂದು ಶನಿವಾರ ಸಂಜೆ 4.30 ಗಂಟೆಗೆ ಕಲಬುರಗಿಗೆ ಆಗಮಿಸಿ, ನಂತರ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.