ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಕಲಬುರಗಿ:ಜ.22:ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜನವರಿ 24 ರಂದು ಬುಧವಾರ ಬೆಳಿಗ್ಗೆ 9.35 ಗಂಟೆಗೆ ಕಲಬುರಗಿಗೆ ಆಗಮಿಸುವರು. ನಂತರ ಕಲಬುರಗಿ ಜಿಲ್ಲೆಯಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.

ಜನವರಿ 25  ಹಾಗೂ 26 ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಜಿಲ್ಲೆಯಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸುವರು.