ಜಿಲ್ಲಾ ಉಸ್ತುವಾರಿ ಸಚಿವರ ಪರಿಷ್ಕøತ ಪ್ರವಾಸ

ಕಲಬುರಗಿ,ಜೂ.19:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಮತ್ತು ಐ.ಟಿ.-ಬಿ.ಟಿ. ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜೂನ್ 20 ರಂದು ಬೆಳಿಗ್ಗೆ 9.45 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ನಂತರ ಸಚಿವರು ಅಂದು ಬೆಳಿಗ್ಗೆ 9.50 ಗಂಟೆಗೆ ಇತ್ತೀಚೆಗೆ ನಿಧನರಾದ ಪೊಲೀಸ್ ಮುಖ್ಯ ಪೇದೆ ಮುಯೂರ್ ಭೀಮು ಚವ್ಹಾಣ ಇವರ ನಿವಾಸಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳುವರು. ಬೆಳಿಗ್ಗೆ 10.30 ಗಂಟೆಗೆ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಪಕ್ಷದ ಅಧೀಕೃತ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಅಂದು ಮಧ್ಯಾಹ್ನ 12.30 ರಿಂದ 2.30 ಗಂಟೆಯವರೆಗೆ ಕಲಬುರಗಿ ಜಿಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೆÇಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 2.30 ಗಂಟೆಗೆ ಕಲಬುರಗಿ ನಗರದ ಐವಾನ್ ಶಾಹಿ ಅತಿಥಿ ಗೃಹದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.