ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಕಲಬುರಗಿ,ಆ.10:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಐ.ಟಿ.-ಬಿ.ಟಿ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೈದ್ರಾಬಾದ್‍ದಿಂದ ರಸ್ತೆ ಮೂಲಕ ಆಗಸ್ಟ್ 11 ರಂದು ಶುಕ್ರವಾರ ಬೆಳಿಗ್ಗೆ 11.30 ಗಂಟೆಗೆ ಕಲಬುರಗಿಗೆ ಆಗಮಿಸುವರು.

ನಂತರ ಕಲಬುರಗಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.15 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ “ಕಲಬುರಗಿ ಕನೆಕ್ಟ್” ಆ್ಯಪ್ ಕುರಿತು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಅಂದು ಮಧ್ಯಾಹ್ನ 2 ರಿಂದ 3.30 ಗಂಟೆಯವರೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಖನಿಜ ಅನುಷ್ಠಾನ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಕುರಿತು ವಿವಿಧ ಇಲಾಖೆಯ ಪರಿಶೀಲನಾ ಸಭೆ ನಡೆಸುವರು.