ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಕಲಬುರಗಿ,ಅ.19:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಅಕ್ಟೋಬರ್ 20 ರಂದು ಮಧ್ಯಾಹ್ನ 2.40 ಗಂಟೆಗೆ ಕಲಬುರಗಿಗೆ ಆಗಮಿಸುವರು.