ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಕಲಬುರಗಿ,ಜು.23:ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ಆರ್. ನಿರಾಣಿ ಅವರು ಬೆಂಗಳೂರಿಂದ ವಿಮಾನದ ಮೂಲಕ ಜುಲೈ 24 ಶನಿವಾರ ಬೆಳಿಗ್ಗೆ 9.45 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿರುವ ಹಾನಿ ಮತ್ತು ಕೈಗೊಂಡ ಪರಿಹಾರ ಕ್ರಮಗಳು ಕುರಿತು ಕಲಬುರಗಿ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.

ನಂತರ ಮಧ್ಯಾಹ್ನ 2 ಗಂಟೆಗೆ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡುವ ಸಚಿವರು ಸಾಯಂಕಾಲ 4.10 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸುವರು.