ಜಿಲ್ಲಾ ಕಸಾಪ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ 109ನೇ ಸಂಸ್ಥಾಪನಾ ದಿನಾಚರಣೆ

ಬೀದರ:ಮೇ.6:ಕನ್ನಡ ನಾಡು, ನುಡಿ, ಭಾಷೆ, ನೆಲ, ಜಲ, ಸಂಸ್ಕøತಿಯ ಬಳಕೆಯಿಂದ ನಮ್ಮ ನಾಡಿನ ಬೆಳವಣಿಗೆ ಸಾಧ್ಯವಾಗುತ್ತದೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರು ಹಾಗೂ ವಿಶ್ರಾಂತ ಕನ್ನಡ ಪ್ರಾಧ್ಯಾಪಕರೂ ಆದ ಪೆÇ್ರ.ಸಿದ್ರಾಮಪ್ಪ ಮಾಸಿಮಾಡೆ ನುಡಿದರು.

ಅವರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ 109ನೆಯ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕನ್ನಡ ಭಾಷೆ ಅಂದರೆ ಅದು ನಮ್ಮ ಹೆಮ್ಮೆ, ಕನ್ನಡದ ಬೆಳವಣಿಗೆಗೆ ನಾವೆಲ್ಲ ಶ್ರಮಿಸಬೇಕು, ಪ್ರತಿಯೊಬ್ಬರೂ ಕನ್ನಡ ಭಾಷೆಯಲ್ಲಿಯೇ ಮಾತನಾಡುವುದನ್ನು ರೂಢಿಸಿಕೊಳ್ಳಬೇಕು. ಕನ್ನಡದಲ್ಲಿ ಒಳ್ಳೆಯ ಮಾತನಾಡುವವರಿಗೆ ಈಗಲೂ ಬೆಲೆ ಇದೆ. ಕನ್ನಡ ಕಲಿತವರಿಗೆ ಸಮಾಜದಲ್ಲಿ ಗೌರವವಿದೆ ಎಂದು ಹೇಳಿದರು. ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣಗಳು ಕನ್ನಡದಲ್ಲಿ ಲಭ್ಯವಾಗಬೇಕು, ಪ್ರತಿಯೊಬ್ಬರೂ ಶುದ್ಧ ಕನ್ನಡದಲ್ಲಿ ಮಾತನಾಡುವ ಸಂಕಲ್ಪ ಮಾಡಬೇಕೆಂದು ಮನವಿ ಮಾಡಿದರು.