ಜಿಲ್ಲಾ ಕಾಂಗ್ರೆಸ್‌ನಿAದ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ‘ನಡೆದಾಡುವ ದೇವರು’ ಎಂದು ಹೆಸರು ಗಳಿಸಿದ್ದ ತ್ರಿವಿಧ ದಾಸೋಹಿ, ಪದ್ಮಭೂಷಣ, ಕರ್ನಾಟಕ ರತ್ನ ಪರಮಪೂಜ್ಯ ಡಾ.ಶಿವಕುಮಾರ ಸ್ವಾಮೀಜಿಗಳವರ ಪುಣ್ಯಸ್ಮರಣೋತ್ಸವವನ್ನು  ದಾವಣಗೆರೆಯ ವಿನೋಬನಗರದಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.ಪರಮಪೂಜ್ಯ ಡಾ.ಶಿವಕುಮಾರ ಸ್ವಾಮೀಜಿಗಳವರ ಲಿಂಗೈಕ್ಯರಾಗಿ 4 ವರ್ಷಗಳಾದವು. ಜಾತಿ-ಧರ್ಮ ನೋಡದೇ ಪ್ರತಿಯೊಬ್ಬರು ಜ್ಞಾನ- ಅನ್ನ ದಾಸೋಹ ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಬಸವಣ್ಣನವರ ಕಾಯಕವೇ ಕೈಲಾಸ ವಚನದಂತೆ ನಡೆದುಕೊಂಡಿದ್ದ ಪರಮಪೂಜ್ಯರನ್ನು ಪ್ರತಿಯೊಬ್ಬರು ಗೌರವಿಸುವಂತಹ ಕೆಲಸ ನಡೆಯುತ್ತಿದೆ ಎಂದು ಸ್ಮರಿಸಲಾಯಿತು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಶಿವಕುಮಾರ್, ಮಹಾನಗರ ಪಾಲಿಕೆ ಸದಸ್ಯ ಎ.ನಾಗರಾಜ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕರ‍್ಯದರ್ಶಿ ಎಸ್.ಮಲ್ಲಿಕಾರ್ಜುನ್, ವೇದಮೂರ್ತಿ, ದ್ರಾಕ್ಷಾಯಣಮ್ಮ, ಶುಭಮಂಗಳ, ರಾಜೇಶ್ವರಿ ಮತ್ತಿತರರು ಉಪಸ್ಥಿತರಿದ್ದರು.