ಜಿಲ್ಲಾ ಕಾಂಗ್ರೆಸ್‌ನಿಂದ ಕನಕದಾಸರ ಜಯಂತಿ


ದಾವಣಗೆರೆ.ನ.೨೩:  ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ದಾಸಶ್ರೇಷ್ಠ ಕನಕದಾಸಕ ಜಯಂತಿ ಹಾಗೂ ಚಿತ್ರದುರ್ಗ-ದಾವಣಗೆರೆ ಜಿಲ್ಲೆಗಳನ್ನೊಳಗೊಂಡ ವಿಧಾನಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಬಿ.ಸೋಮಶೇಖರ್ ಅವರ ಪರಿಚಯ ಕಾರ‍್ಯಕ್ರಮ   ಜಿಲ್ಲಾ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪನವರು ಕನಕದಾಸರು ಈ ನಾಡಿಗೆ ಸಂದೇಶ ನೀಡಿದ್ದು, ಅವರ ಮಾರ್ಗದರ್ಶನದಂತೆ ನಡೆದರೆ ಉತ್ತಮ ಸಮಾಜ ನಿರ್ಮಾಣ ಮಾಡಬಹುದು ಎಂದರು.ಚಿತ್ರದುರ್ಗ-ದಾವಣಗೆರೆ ಜಿಲ್ಲೆಗಳನ್ನೊಳಗೊಂಡ ವಿಧಾನಪರಿಷತ್ ಚುನಾವಣೆಗೆ ಬಿ.ಸೋಮಶೇಖರ್ ಅವರು ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿದ್ದು, ಗ್ರಾಮ ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಸೋಮಶೇಖರ್ ಅವರಿಗೆ ಮತ ಚಲಾಯಿಸುವ ಮೂಲಕ ಕಾಂಗ್ರೆಸ್ ಗೆಲುವಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.ಸಭೆಯನ್ನುದೇಶಿಸಿ ಶಾಸಕ ಎಸ್.ರಾಮಪ್ಪ, ರಾಜ್ಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್, ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಶಿವಕುಮಾರ್. ಅಭ್ಯರ್ಥಿ ಬಿ.ಸೋಮಶೇಖರ್ ಮಾತನಾಡಿದರು.ಈ ಸಂದರ್ಭದಲ್ಲಿ ಡಾ.ವೈ.ರಾಮಪ್ಪ, ಜೆ.ಕೆ.ಕೊಟ್ರಬಸಪ್ಪ, ಎ.ನಾಗರಾಜ್, ಎಸ್.ಮಲ್ಲಿಕಾರ್ಜುನ್, ಕೆ.ಎಸ್.ಬಸವಂತಪ್ಪ, ಪಿ.ರಾಜಕುಮಾರ್, ಎಂ.ನಾಗೇAದ್ರಪ್ಪ, ಮಹಾನಗರ ಪಾಲಿಕೆ ಸದಸ್ಯರು, ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್‌ಎಸ್‌ಯುಐ, ಸೇವಾದಳ, ಪರಿಶಿಷ್ಟ ಜಾತಿ ಮತ್ತು ಪಂಗಡ ವಿಭಾಗ, ಓಬಿಸಿ, ಅಲ್ಪಸಂಖ್ಯಾತರ ವಿಭಾಗ, ವೈದ್ಯಕೀಯ, ವಕೀಲರ ಘಟಕ, ಕಿಸಾನ್ ಘಟಕ, ಅಸಂಘಟಿತ ಕಾರ್ಮಿಕರ ಘಟಕ, ವಿಕಲಚೇತರ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಲಿ ಮತ್ತು ಮಾಜಿ ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದರು.