ಜಿಲ್ಲಾ ಕಾಂಗ್ರೆಸ್ ಎನ್.ಎಸ್.ಯು.ಐ. ವತಿಯಿಂದ ಪ್ರತಿಭಟನೆ

(ಸಂಜೆವಾಣಿ ವಾರ್ತೆ)
ವಿಜಯಪುರ: ಆ.3: ಜಿಲ್ಲಾ ಕಾಂಗ್ರೆಸ್ ಎನ್.ಎಸ್.ಯು.ಐ. ಘಟಕದ ವತಿಯಿಂದ ಡಾ: ಬಾಬಾಸಾಹೇಬ ಅಂಬೇಡ್ಕರ ವೃತ್ತದಲ್ಲಿ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ವಿರುದ್ಧ ಪ್ರತಿಭಟನೆ ಮಾಡಲಾಯಿತು. ಈ ಪ್ರತಿಭಟನೆಯನ್ನು ಉದ್ದೇಶಿಸಿ ಎನ್.ಎಸ್.ಯು.ಐ. ಜಿಲ್ಲಾ ಘಟಕದ ಅಧ್ಯಕ್ಷರಾದ ಅಮೀತ ಚವ್ಹಾಣ ಅವರು ಮಾತನಾಡಿ ಮಣಿಪುರ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಹಾಗೂ ಇಬ್ಬರು ಮಹಿಳೆಯರ ಬೆತ್ತಲೆ ಪ್ರಕರಣವು ಸದರಿ ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ಕುಸಿದಿರುವುದು ಕಂಡುಬರುತ್ತದೆ ಹಾಗೂ ಸಾಂವಿಧಾನಿಕ ಸಂಸ್ಥೆಗಳು ನಿಷ್ಕ್ರೀಯೆವಾಗಿರುವುದನ್ನು ತೋರಿಸುತ್ತದೆ. ಮಹಿಳೆಯರಿಗೆ ಅನ್ಯಾಯವಾಗಿದ್ದು ಅವರಿಗೆ ಸುರಕ್ಷೆ ನೀಡಲು ಸರಕಾರ ವಿಫಲವಾಗಿದ್ದು, ಕೇಂದ್ರ ಹಾಗೂ ರಾಜ್ಯ (ಡಬಲ್ ಇಂಜನ್) ಆಡಳಿತಗಳು ವಿಫಲವಾಗಿರುತ್ತದೆ. ಹಲವು ರಾಜ್ಯಗಳಲ್ಲಿ ಕೋಮು ಗಲಭೆ ನಡೆಯುತ್ತಿದ್ದರೂ ನಮ್ಮ ಪ್ರಧಾನಿ ಒಂದು ಸಲವೂ ಇಂತಹ ಘಟನೆಗಳ ಬಗ್ಗೆ ಪ್ರತಿಕ್ರೀಯೆ ನೀಡುತ್ತಿಲ್ಲ ಹಾಗೂ ಹಿಂಸೆ ತಡಯುವ ಯಾವುದೇ ಕಠಿಣ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿಲ್ಲ. ಇದು ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ತೋರಿಸಿಕೊಡುತ್ತದೆ ಎಂದು ಹೇಳಿದರು.
ಈ ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪವನ ಬಿರಾದಾರ, ಶರಣು ದೊಡಮನಿ, ಮಾಳು ಬಂಡಿವಡ್ಡರ, ಭೀಮು ಗೊಗದೊಡ್ಡಿ, ಹಾಗೂ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಹಾಗೂ ತಾಲೂಕಾ ಪದಾಧಿಕಾರಿಗಳು ಉಪಸ್ಥಿತರಿದ್ದರು.