ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಏ.14ರಂದು ಡಾ.ಅಂಬೇಡ್ಕರ ಜಯಂತಿ

ಕಲಬುರಗಿ,ಏ.12- ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಏ.14ರ ಬೆಳಿಗ್ಗೆ 10 ಗಂಟೆಗೆ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ: ಬಾಬಾ ಸಾಹೇಬ ಅಂಬೇಡ್ಕರ್ ರವರ ಜನ್ಮ ದಿನವನ್ನು ಆಚರಿಸÀಲಾಗುವದು.
ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು, ಪಕ್ಷದ ವಿವಿಧ ಘಟಕಗಳ ಪ್ರಮುಖರು, ಕಾರ್ಯಕರ್ತರು ತಪ್ಪದೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.