ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಕೋಲಾರ,ಅ,೨೯:ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಶನಿವಾರ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮಾತನಾಡಿ, ಪುರಾಣಗಳಲ್ಲಿ ಉಳಿಯುವಂತೆ ಮಾನವೀಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ದಾರ್ಶನಿಕ ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದು ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಅವರ ಮಾರ್ಗದರ್ಶನದಲ್ಲಿ ನಾವು ಎಲ್ಲರೂ ನಡೆದಾಗ ಮಾತ್ರವೇ ಅವರಿಗೆ ಗೌರವ ಕೊಟ್ಟಂತೆ ಆಗುತ್ತದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ಅಧ್ಯಕ್ಷ ವಕೀಲ ನಾಗರಾಜ್ ಮಾತನಾಡಿ, ರಾಮಾಯಣವನ್ನು ಇಡೀ ಜಗತ್ತಿಗೆ ಪರಿಚಯಿಸಿದ ಕೀರ್ತಿ ವಾಲ್ಮೀಕಿಗೆ ಸಲ್ಲುತ್ತದೆ ಯಾವುದೇ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದವರಲ್ಲ. ಅವರ ಆದರ್ಶ, ಶ್ರದ್ಧೆಯನ್ನು ಪ್ರತಿಯೊಬ್ಬರಿಗೂ ಸಲ್ಲುತ್ತದೆ ಪ್ರೀತಿ, ವಿಶ್ವಾಸ, ನೆಮ್ಮದಿಯಿಂದ ಬದುಕಲು ವಾಲ್ಮೀಕಿ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್ ಮಾತನಾಡಿ, ರಾಮಾಯಣ ಮಹಾಕಾವ್ಯ ಬರೆಯುವ ಮೂಲಕ ಸತತ ಪರಿಶ್ರಮವಿದ್ದಲ್ಲಿ ಸಾಧನೆ ಮಾಡಬಹುದು ಎಂಬುದನ್ನು ಸಮಾಜಕ್ಕೆ ತೋರಿಸಿಕೊಟ್ಟಿದ್ದಾರೆ ವಿಶ್ವಕ್ಕೆ ರಾಮಾಯಣದಂತಹ ಮಹಾನ್ ಗ್ರಂಥವನ್ನು ನೀಡಿದ ಅವರು ಮಾನವ ಕುಲಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ವಾಲ್ಮೀಕಿಯಂತೆ ಬುದ್ಧ, ಬಸವಣ್ಣ, ಕನಕದಾಸರು, ಅಂಬೇಡ್ಕರ್ ಅವರು ಕೂಡ ಸಾಮಾಜಿಕ ಸಮಾನತೆಗಾಗಿ ಹೋರಾಟ ಮಾಡಿದ್ದಾರೆ ಆದ್ದರಿಂದ ಇವರನ್ನು ಸದಾ ಸ್ಮರಿಸಬೇಕಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಪ್ರಸಾದ್ ಬಾಬು, ಓಬಿಸಿ ವಿಭಾಗದ ರಾಜ್ಯ ಉಪಾಧ್ಯಕ್ಷ ಒಬಿಸಿ ಮಂಜುನಾಥ್, ಕಾರ್ಮಿಕ ಘಟಕದ ಅಧ್ಯಕ್ಷ ಹೊನ್ನೇನಹಳ್ಳಿ ಯಲ್ಲಪ್ಪ, ನಗರಸಭೆ ಸದಸ್ಯರಾದ ಸೂರಿ, ಸಾಧೀಕ್, ಮುಖಂಡರಾದ ವೆಂಕಟಪತಿ, ಲಾಲ್ ಬಹಾದ್ದೂರ್ ಶಾಸ್ತ್ರಿ, ರಮೇಶ, ತಿರುಮಲೇಶ್, ರಾಮಯ್ಯ, ರಾಮಚಂದ್ರ, ಬಾಬಾಜಾನ್, ಅಮರ್, ಹರೀಶ್ ಇದ್ದರು.