ಜಿಲ್ಲಾ ಕಾಂಗ್ರೆಸ್ ಕಾಂರ್ಯಾಧ್ಯಕ್ಷರಾಗಿ ಜೆಡಿಎಸ್ ಕಿವಿಮಾತು

ಕೋಲಾರ,ಜೂ.೦೬: ಕಾಂಗ್ರೆಸ್ ಪಕ್ಷದ ಶಾಸಕರು ಎಂಎಲ್ಸಿಗಳನ್ನು ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರ ವೈಫಲ್ಯ, ದರ್ಪ ಅಹಂಕಾರದಿಂದ ಕಾಂಗ್ರೆಸ್ ಚುನಾವಣೆಯಲ್ಲಿ ಸೋತಿದೆ ಎಂದು ಹೇಳುವಂತ ಪ್ರಬುದ್ಧ ರಾಜಕಾರಣಿಯಾಗಿ ಇನ್ನೂ ನೀವು ಬೆಳೆದಿಲ್ಲಪ್ಪ ನೀವು ಇನ್ನೂ ಬೆಳೆಯುತ್ತಾ ಇರುವ ರಾಜಕಾರಣಿಯಾಗಿದ್ದೀಯಾ ಯಾವುದೇ ಜನಪ್ರತಿನಿಧಿಗಳ ಬಗ್ಗೆ ಮಾತಾಡುವಾಗ ಬಹಳ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಅವರಿಗೆ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಕಿವಿಮಾತು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಬಗ್ಗೆ ಮಾತಾಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಶಾಸಕರು, ಉಸ್ತುವಾರಿ ಸಚಿವರು ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತಮ್ಮದೇ ಆದ ಶ್ರಮದಿಂದ ಕಳೆದ ಬಾರಿಯ ಲೋಕಸಭಾ ಚುನಾವಣೆಗಿಂತ ಒಂದುವರೆ ಲಕ್ಷದಷ್ಟು ಹೆಚ್ಚಿನ ಮತಗಳನ್ನು ಗಳಿಸಿದ್ದೇವೆ ನಮ್ಮಲ್ಲಿನ ಸಣ್ಣಪುಟ್ಟ ವ್ಯತ್ಯಾಸಗಳಿಂದ ಹಾಗೂ ಕ್ಷೇತ್ರದಲ್ಲಿ ನೀವು ಮೈತ್ರಿ ಆಗಿದ್ದರಿಂದಾಗಿ ಮಲ್ಲೇಶ್ ಬಾಬು ಗೆದ್ದಿರಬಹುದು ನೀವು ಮಾತಾಡುವಾಗ ಮಾತುಗಳನ್ನು ಬಿಗಿಯಿಂದ ಮಾತಾಡಬೇಕು ಅದರಲ್ಲೂ ಕಾಂಗ್ರೆಸ್ ಪಕ್ಷದ ಶಾಸಕರ ಮತ್ತು ಸರಕಾರದ ಬಗ್ಗೆ ಆರೋಪ ಮಾಡುವುದು ನಿನ್ನಂತ ಕಿರಿಯ ರಾಜಕಾರಣಿಯ ವ್ಯಕ್ತಿತ್ವಕ್ಕೆ ಶೋಭೆ ತರುವಂತದ್ದು ಅಲ್ಲ ಎಂದರು.
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಸೋತಿರಬಹುದು ಆದರೆ ಕಳೆದ ಬಾರಿಗಿಂತ ಹೆಚ್ಚಿನ ಮತ ಗಳಿಕೆ ಮಾಡಿದ್ದಾರೆ ನಿಮ್ಮ ಗೆಲುವು ದೊಡ್ಡ ಗೆಲುವು ಅಲ್ಲ ನಿಮಗೂ ಇದು ಎಚ್ಚರಿಕೆ ಘಂಟೆಯಾಗಿದೆ ಎಂಬುದನ್ನು ಮರೆಯ ಬಾರದು ಎಂದರು,
ಕಳೆದ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ನಿನ್ನ ಸೋಲಿಗೆ ಮೊದಲು ಅತ್ಮವಿಮರ್ಶೆ ಮಾಡಿಕೊಂಡು ನಂತರ ಕಾಂಗ್ರೆಸ್ ಪಕ್ಷದ ಸೋಲಿನ ಬಗ್ಗೆ ಮಾತನಾಡು ನೀನು ಇನ್ನೂ ಬೆಳೆಯುತ್ತಾ ಇರುವ ರಾಜಕಾರಣಿ ಯಾರೋ ಹೇಳುವ ಮಾತುಗಳಿಗೆ ಕಾಂಗ್ರೆಸ್ ಪಕ್ಷವನ್ನು ದೂರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಸುಳ್ಳು ಭರವಸೆಗಳು ನೀಡಿ ಅಥವಾ ಜನರನ್ನು ಯಾಮಾರಿಸಿ ಅಧಿಕಾರಕ್ಕೆ ಬಂದಿಲ್ಲ ಜನರ ವಿಶ್ವಾಸ ಗಳಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದೇವೆ ಜನರ ಆಶೋತ್ತರಗಳಿಗೆ ಅನುಗುಣವಾಗಿ ಕೆಲಸ ಮಾಡಿಕೊಂಡು ಬಂದಿದ್ದೇವೆ ಜೊತೆಗೆ ನುಡಿದಂತೆ ನಡೆದುಕೊಂಡು ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ನಿಮ್ಮಂತ ಸುಳ್ಳು ಆರೋಪಗಳಿಗೆ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು ಹಾಗೂ ಸರಕಾರ ಕಿವಿಕೊಡುವ ಅವಶ್ಯಕತೆ ಇಲ್ಲ ಎಂದರು
ಕೋಲಾರ ಲೋಕಸಭಾ ಮೀಸಲು ಕ್ಷೇತ್ರದ ಚುನಾವಣೆಯಲ್ಲಿ ಸುಮಾರು ೫.೬೭ ಲಕ್ಷದಷ್ಟು ಮತಗಳನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ವಿ ಗೌತಮ್ ಅವರಿಗೆ ನೀಡಿದ್ದಾರೆ ಇಷ್ಟು ಮತಗಳನ್ನು ಕೊಡಿಸಲು ಶ್ರಮ ವಹಿಸಿದ ಪ್ರತಿಯೊಬ್ಬ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೂ ಹಾಗೂ ಮುಖಂಡರಿಗೂ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.