ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದಿಂದ ಬಡ ಜನರಿಗೆ ಉಪಹಾರ

ದಾವಣಗೆರೆ.ಜೂ.೭; ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದಿಂದ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಬಡ ಜನರು ಮತ್ತು ಕೂಲಿ ಕಾರ್ಮಿಕರಿಗೆ ಊಟ, ನೀರು ಮತ್ತು ಮಾಸ್ಕ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಕೋವಿಡ್ ಸಂಕಷ್ಟದಲ್ಲಿ ತೊಂದರೆಯಲ್ಲಿರುವ ಸುಮಾರು 500 ಜನರಿಗೆ ಊಟ, ನೀರು ಮಾಸ್ಕ್ ವಿತರಿಸಿ ಮಾತನಾಡಿದ ಕೆಪಿಸಿಸಿ ರಾಜ್ಯ ವಕ್ತಾರ ಡಿ.ಬಸವರಾಜ ಅನ್ನದಾನ ಎಲ್ಲಾ ದಾನಗಳಿಗಿಂತಲೂ ಶ್ರೇಷ್ಠವಾದದ್ದು ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕೆಲಸ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಹೆಚ್ ಸುಬಾನ್ ಸಾಬ್ ಮತ್ತು ಅವರ ತಂಡವನ್ನು ಅವರು ಅಭಿನಂದಿಸಿದರು.  ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಡಾ. ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ನಗರದ ಜನತೆ ಕೊರೊನಾ ಸಂಕಷ್ಟದಿಂದ ಪಾರಾಗಲು ತಮ್ಮ ಸ್ವಂತ ಹಣ ನಾಲ್ಕು ಕೋಟಿ ರೂಪಾಯಿ ಮೊತ್ತದ ಅರವತ್ತು ಸಾವಿರ ಕೊರೊನಾ ಕೋವಿಶೀಲ್ಡ್ ಲಸಿಕೆಯನ್ನು ದಾವಣಗೆರೆ ಜನತೆಗೆ ತರಿಸಿದ್ದು, ದೇಶದಲ್ಲೇ ಇದೊಂದು ವಿನೂತನ ಕಾರ್ಯಕ್ರಮವಾಗಿದ್ದು ಇದರ ಪ್ರಯೋಜನವನ್ನು ನಗರದ ಪ್ರತಿಯೊಬ್ಬ ನಾಗರಿಕರು ಪಡೆಯಬೇಕು ಎಂದು ಇದೇ ಸಂದರ್ಭದಲ್ಲಿ ಡಿ.ಬಸವರಾಜ ಕರೆ ನೀಡಿದರು ಕಾರ್ಯಕ್ರಮದಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಹೆಚ್. ಸುಭಾನ್ ಸಾಬ್, ಜಿಲ್ಲಾ ಕಾಂಗ್ರೆಸ್ ಇಂಟಕ್ ವಿಭಾಗದ ಅಧ್ಯಕ್ಷರಾದ ಕೆ.ಎಂ ಮಂಜುನಾಥ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಪದಾಧಿಕಾರಿಗಳಾದ ಆಸೀಫ್ ಅಲಿ, ಗೋಪಾಲ್ ದೇವರಮನಿ, ಸೈಫುಲ್ಲಾ, ತಜಿಮುಲ್, ಪ್ರಕಾಶ್ , ಕೆ.ವಿ ನಾಗರಾಜ್ ಇತರರು ಇದ್ದರು.