ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ಶಾಹಿರಾಬಾನು ನೇಮಕ


ಸಂಜೆವಾಣಿ ವಾರ್ತೆ
ಹಗರಿಬೊಮ್ಮನಹಳ್ಳಿ.ಸೆ.28 ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಮಹಿಳೆಯರ ಸಂಘಟನೆ ಮಾಡುವ ಮೂಲಕ, ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತೆಯಾಗಿ  ಪಕ್ಷದ ಎಲ್ಲಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಶಾಹಿರಾಬಾನು ಸೇವೆಯನ್ನು ಗುರುತಿಸಿ ಪಕ್ಷವು ವಿಜಯನಗರ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಪಟ್ಟಣದ ನಿವಾಸಿಯಾಗಿರುವ ಸಾಹಿರಾಬಾನು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ನಗರ ಮತ್ತು ಗ್ರಾಮೀಣ ಅಮ್ಮ ಸಂಸ್ಥೆಯ ಮೂಲಕ ನೊಂದ  ಬಡವರಿಗೆ  ಸಹಾಯವನ್ನು ಚಾಚುತ್ತ ಕೋವಿಡ್ ಸಂದರ್ಭದಲ್ಲಿ ತಮ್ಮ ಸ್ವಂತ ಹಣದಿಂದ ಆಹಾರ ಕಿಟ್ ವಿತರಿಸಿದರು.
ಇವರ ಸೇವೆಯನ್ನು ಗುರುತಿಸಿ ಕರ್ನಾಟಕ ಕಾಂಗ್ರೆಸ್ ಪಕ್ಷ ಇವರಿಗೆ ಒಂದು ಜವಾಬ್ದಾರಿಯ ಮಹಿಳಾ ಜಿಲ್ಲಾ  ಅಧ್ಯಕ್ಷ ಸ್ಥಾನವನ್ನು ನೀಡಿ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಅನುವು  ಮಾಡಿಕೊಡಲಾಗಿದೆ
ಮಹಿಳೆ ಜಿಲ್ಲಾ ಕಾಂಗ್ರೆಸ್ ಹುದ್ದೆ ಅಲಂಕರಿಸುತ್ತಿರುವುದು ಸಂತೋಷವಾಗಿದೆ. ಇದಕ್ಕೆ ಕಾರಣಿಭೂತರದ ಕ್ಷೇತ್ರದ ಶಾಸಕ ಎಸ್. ಭೀಮನಾಯ್ಕ್ ರವರಿಗೂ ಅಭಿನಂದನೆ ಸಲ್ಲಿಸುತ್ತೇನೆ.

Attachments area