ಜಿಲ್ಲಾ ಕಾಂಗ್ರೆಸ್ ವಿಭಾಗದ ಕಾರ್ಯಕರ್ತರ ಸಮಾವೇಶ


ಸಂಜೆವಾಣಿ ವಾರ್ತೆ
ಹರಪನಹಳ್ಳಿ, ಜ.05: ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಕಾರ್ಯಕರ್ತರ ಸಮಾವೇಶ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಜನವರಿ 7ರಂದು ಪಟ್ಟಣದ ಹಳೇಯ ಬಸ್ಸು ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲೆಯ ಕಾರ್ಮಿಕ ವಿಭಾಗದ ಅಧ್ಯಕ್ಷ ಎ.ಮೂಸಾ ಸಾಹೇಬ್ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದಿನ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ, ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ನಸರುಲ್ಲಾ ಕಾರ್ಮಿಕ ಘಟಕದ ರಾಜ್ಯಧ್ಯಕ್ಷ ಪುಟ್ಟಸ್ವಾಮಿ ಗೌಡ, ಹಡಗಲಿ ಶಾಸಕ ಪಿ.ಟಿ ಪರಮೇಶ್ವರನಾಯ್ಕ, ರಾಜಸಭಾ ಸದಸ್ಯ ನಸೀರ್‍ಹುಸೇನ್ ವಿದಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬರ್, ಕೆಪಿಸಿಸಿ ವಕ್ತಾರೆ ಕವಿತಾರೆಡ್ಡಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಲೂರು ಅಂಜಪ್ಪ, ಚಿಗಟೇರಿ ಬ್ಲಾಕ್ ಅಧ್ಯಕ್ಷ ಪ್ರೇಮ ಕುಮಾರ್, ಭಾಗವಹಿಸಲಿದ್ದಾರೆ ಎಂದರು.
ರಾಜ್ಯದಲ್ಲಿ ವ್ಯಾಪಕ ಭ್ರಷ್ಟಚಾರ ನಡೆಸಿರುವ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಮತ್ತು
ಕಾರ್ಮಿಕ ಆಯುಕ್ತರನ್ನು ಮುಖ್ಯ ಮಂತ್ರಿಗಳು ಕೂಡಲೆ ವಜಾಗೊಳಿಸಬೇಕು. ಗುತ್ತಿಗೆದಾರರ ಮೆಸ್ತ್ರಿಗಳಿಗೆ ಆಗುತ್ತಿರುವ ಹಣಕಾಸಿನ ವಂಚನೆ ತಡೆಗಟ್ಟಲು ವಿಶೇಷ ಕಾನೂನು ಜಾರಿ ಮಾಡಬೇಕು.
ಬಿಲ್ಡರ್‍ಗಳಿಂದ ಸಣ್ಣಗುತ್ತಿಗೆ ವಹಿಸಬೇಕು. ಇತರೆ ಬೇಡಿಕೆಗಳನ್ನು ಇತ್ಯಾ ರ್ಥಗೊಳಿಸಲು ಅಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾ ಗುವುದು ಎಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಲೂರು ಅಂಜಪ್ಪ ಮಾತನಾಡಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕರ ವಿಭಾಗದ ಕಾರ್ಯಕರ್ತರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದು, ಈ ಸಮಾವೇಶಕ್ಕೆ ಪಕ್ಷಾತೀತವಾಗಿ ಎಲ್ಲಾ ಕಾರ್ಮಿಕರು ಹಾಗೂ ಹರಪನಹಳ್ಳಿ ಕಾಂಗ್ರೆಸ್ ಪಕ್ಷದ 17 ಜನ ಟಿಕೆಟ್ ಆಕಾಂಕ್ಷಿಗಳು ಒಂದೇ ವೇದಿಕೆಯಲ್ಲಿ ಆಹ್ವಾನಿಸಲಾಗಿದೆ ಎಲ್ಲಾ ಆಕಾಂಕ್ಷಿಗಳು ಬರಲಿದ್ದಾರೆ ಮತ್ತು ಮುಂಚೂಣಿ ಘಟಕದ ಅಧ್ಯಕ್ಷರುಗಳು, ಪದಾಧಿಕಾರಿಗಳು ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದರು
ಇದೇ ವೇಳೆ ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರೇಮ್ ಕುಮಾರ್ ಮಾತನಾಡಿದರು
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ವಿಭಾಗದ ಉಪಾಧ್ಯಕ್ಷ ಎಂ.ಕೆ. ರಾಯಲ್ ಸಿದ್ದಿಕ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಶಾಂತವೀರನಾಯ್ಕ, ಸಂಘಟನಾ ಕಾರ್ಯದರ್ಶಿ ಷಣ್ಮುಖಪ್ಪ, ತಾಲೂಕು ಅಧ್ಯಕ್ಷ ರಾಜುನಾಯ್ಕ, ಪುರಸಭಾ ಸದಸ್ಯ ಜಾಕೀರ್ ಹುಸೇನ್, ತಾಲೂಕು ಉಪಾಧ್ಯಕ್ಷ ಗೌಸ್, ಎನ್.ಎಸ್.ಯು.ಐ ಘಟಕದ ಅಧ್ಯಕ್ಷ ಶ್ರೀಕಾಂತ್, ಇತರರು ಇದ್ದರು