ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪಂಡಿತ್ ಜವಾಹರಲಾಲ್ ನೆಹರು ಪುಣ್ಯತಿಥಿ ಆಚರಣೆ

ವಿಜಯಪುರ, ಮೇ.28-ಭಾರತದ ಪ್ರಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂರವರ 57ನೇ ಪುಣ್ಯತಿಥಿ ಅಂಗವಾಗಿ ಇಂದು ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ, ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗು ಜಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಪಕ್ಷದ ಮುಖಂಡರಾದ ಅಬ್ದುಲ್‍ಹಮೀದ್ ಮುಶ್ರೀಫರವರ ನೇತೃತ್ವದಲ್ಲಿ ಜವಾಹರಲಾಲ್ ನೆಹರೂರವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಪುಣ್ಯಸ್ಮರಣೆ ಆಚರಿಸಲಾಯಿತು.
ಈ ಸಂಧರ್ಭದಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಅಬ್ದುಲ್‍ಹಮೀದ್ ಮುಶ್ರೀಫರವರು ಮಾತನಾಡುತ್ತಾ ಪಂಡಿತ್ ಜವಾಹರಲಾಲ್ ನೆಹರೂರವರು ಮಹಾತ್ಮ ಗಾಂಧಿರವರೊಂದಿಗೆ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೋಂಡು ಭಾರತ ದೇಶ ಸ್ವಾತಂತ್ರ್ಯವಾಗಲು ಅವರು ಒಬ್ಬರು ಕಾರಣೀಭೂತರು ಎಂದರು.
ನಂತರ ಅವರು ಭಾರತದ ಮೊದಲ ಪ್ರಧಾನಿಯಾಗಿ ಈ ದೇಶದ ಅಭಿವೃದ್ಧಿಗಾಗಿ ಹಗಲಿರುಳು ದುಡಿದು ಔದ್ಯೋಗಿಕ ಕ್ಷೇತ್ರದಲ್ಲಿ ಮಹಾಸಾಧನೆ ಗೈದಂತಹ ವiಹಾನ್ ವ್ಯಕ್ತಿತ್ವ ಹೊಂದಿದ್ದರು. ಬಾಹ್ಯಾಕಾಶ ಕ್ಷೇತ್ರದಲ್ಲಿ ವಿಜ್ಞಾನಿಗಳನ್ನು ನೇಮಿಸಿ ಭಾರತವನ್ನು ಇಡೀ ವಿಶ್ವದಲ್ಲಿಯೇ ಮುಂಬರಲು ಕಾರಣೀಭೂತರಾದರು. ವಿಶ್ವದಾದ್ಯಂತ 156ದೇಶಗಳನ್ನು ಒಗ್ಗೂಡಿಸಿ ಅಲಿಪ್ತ ರಾಷ್ಟ್ರಗಳ ಅಧ್ಯಕ್ಷತೆಯನ್ನು ಜವಾಹರಲಾಲ ನೆಹರೂರವರು ಹೊಂದಿದ್ದರು, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷವನ್ನು ಉತ್ತುಂಗಕ್ಕೆ ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಈ ದೆಸೆಯಲ್ಲಿ ಕಾಂಗ್ರೆಸ್ ಪಕ್ಷದ ನಾವುಗಳೆಲ್ಲ ಇಂತಹ ಮಹಾನ್ ನಾಯಕರ ತತ್ವ ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ಜನ ಸೇವೆ ಮಾಡೋಣ ಎಂದು ಕರೆ ನೀಡಿದರು.
ಈ ಸಂಧರ್ಭದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ಉಪಾಧ್ಯಕ್ಷ ಮಹ್ಮದ ರಫಿಕ ಟಪಾಲ, ವಿಜಯಪುರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿದ್ಯಾರಾಣಿ ತುಂಗಳ, ವಿಜಯಪುರ ನಗರ ಬ್ಲಾಕ್ ಅಧ್ಯಕ್ಷ ಜಮಿರ್‍ಅಹ್ಮದ್ ಬಕ್ಷೀ, ಶಬ್ಬೀರ ಜಾಗೀರದಾರ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಜಲನಗರ ಬ್ಲಾಕ್ ಅಧ್ಯಕ್ಷೆ ಆರತಿ ಶಹಾಪೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಹೊನಮೊಡೆ. ರಾಜ್ಯ ಮಹಿಳಾ ಉಪಾದ್ಯಕ್ಷೆ ಜಯಶ್ರೀ ಭಾರತೆ, ಜಿಲ್ಲಾ ಮಹಿಳಾ ಉಪಾಧ್ಯಕ್ಷೆ ಲಲಿತಾ ದೊಡಮನಿ, ಅಮೀತ್ ಚವ್ಹಾಣ, ಶಮೀಮ ಅಕ್ಕಲಕೋಟ, ಆಸ್ಮಾ ಕಾಲೆಬಾಗ, ಸುಜಾತಾ ಶಿಂದೆ, ದಾನಮ್ಮ ಜಿರಳೆ, ರೇಣುಕಾ ಲೋಗಾವಕರ, ಹಾಜಿ ಪಿಂಜಾರೆ, ಎಂ.ಎಂ.ಬಕ್ಷಿ, ಜಾವೀದ ಶೇಖ, ಆಸೀಪ ಪುಂಗೆವಾಲೆ ಮುಂತಾದವರು ಉಪಸ್ಥಿತರಿದ್ದರು.