ಜಿಲ್ಲಾ ಕಾರಾಗೃಹಕ್ಕೆ ನ್ಯಾಯಾಧೀಶರ ಭೇಟಿ

ತುಮಕೂರು, ಜು. ೨೧- ಇಲ್ಲಿನ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರಿನ್ನೀಸಾ ಅವರು ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು.
ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ ನ್ಯಾಯಾಧೀಶರು ಕಾರಾಗೃಹದಲ್ಲಿನ ಮೂಲಭೂತ ಸೌಲಭ್ಯಗಳು ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ವೀಕ್ಷಿಸಿದರು.
ಕಾರಾಗೃಹದ ಅಡುಗೆ ಕೋಣೆ, ಹೂ ತೋಟ, ಪ್ರತಿ ಬ್ಯಾರಿಕೇಡನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪರಿವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ನರಸಿಂಹಪ್ಪ, ಕಾರಾಗೃಹ ಅಧೀಕ್ಷಕಿ ಶಾಂತ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.