ಜಿಲ್ಲಾ ಕೌಶಲ್ಯ ಮಿಷನ್‍ದಿಂದ ಸ್ವಚ್ಛತಾ ಜಾಥಾ ಅಭಿಯಾನ

ಕಲಬುರಗಿ.ಅ.30:ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಅಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲೆಯ ಸಾರ್ವಜನಿಕರಿಗೆ ಪರಿಸರ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಶುಕ್ರವಾರ ಕಲಬುರಗಿ (ಪು) ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರದಿಂದ, ಕೇಂದ್ರ ಬಸ್‍ನಿಲ್ದಾಣ ಹಾಗೂ ಕಣ್ಣಿ ಮಾಕೇಟ್‍ವರೆಗೂ ಸ್ವಚ್ಛತಾ ಜಾಥಾ ಅಭಿಯಾನ ಹಮ್ಮಿಕೊಳ್ಳಲಾಯಿತು.
ಕಲಬುರಗಿ ನಗರದ ಕಣ್ಣಿ ಮಾರ್ಕೇಟ್ ಆವರಣದಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕೌಲ್ಯಾಭಿವೃದ್ಧಿ ಅಧಿಕಾರಿಗಳಾದ ಎನ್.ಬಿ. ದೊಡ್ಡಮನಿ ಮಾತನಾಡಿ, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯ ಮಹತ್ವವನ್ನು ತಿಳಿಸಿದರು.
ಈ ಜಾಥಾದಲ್ಲಿ ಜಿಲ್ಲಾ ಕೌಲ್ಯಾಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಕೌಶ್ಯಲ್ಯ ಮಿಷನ್ ಮತ್ತು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಸಿಬ್ಬಂದಿಗಳು, ಕೌಶಲ್ಯ ತರಬೇತಿ ಕೇಂದ್ರಗಳ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 250 ಜನರು ಭಾಗವಹಿಸಿದರು.