ಜಿಲ್ಲಾ ಗುರುಭವನ ಕಟ್ಟಡ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಲು ಸೂಚನೆ

ವಿಜಯಪುರ, ಎ.8-ಎರಡು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಜಿಲ್ಲಾ ಗುರುಭವನ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿದ್ದು, ಶೀಘ್ರದಲ್ಲಿ ಗುರುಭವನ ಪೂರ್ಣಗೊಳಿಸಿ ಶಿಕ್ಷಕರಿಗೆ ಅನುಕೂಲ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ ರವರು ಸ್ಥಗಿತಗೊಂಡ ಜಿಲ್ಲಾ ಗುರು ಭವನಕ್ಕೆ ಭೆಟ್ಟಿ ಕೊಟ್ಟು ಪರಿಶೀಲಿಸಿ ಮಾತನಾಡುತ್ತ, ಶಿಕ್ಷಕರ ಕಲ್ಯಾಣ ನಿಧಿಯಿಂದ ನಾನು ಪ್ರಾಮಾಣಿಕ ಸಹಕಾರ ನೀಡುವೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯಧರ್ಶಿ ಜಗದೀಶ ಬೋಳಸಾರ ಇವರು ಮಾತನಾಡಿ, ಅತೀ ಶೀಘ್ರದಲ್ಲಿ ಶಾಸಕರ ಅನುದಾನ, ಸಂಸದರ ಅನುದಾನ, ಶಿಕ್ಷಕರ ವಂತಿಗೆ ಸಂಗ್ರಹಿಸಿ ಉತ್ತರ ಕರ್ನಾಟಕದಲ್ಲಿ ಸುಸಜ್ಜಿತವಾದ ಕಟ್ಟಡ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ, ರಾಜ್ಯ ಕೋಶಾಧ್ಯಕ್ಷರಾದ ಸುರೇಶ ಶೆಡಶ್ಯಾಳ,ನಾಗನಗೌಡ ರಾಜ್ಯ ಸಂಘಟನಾ ಕಾರ್ಯದರ್ಶಿ, ಜುಬೇರ ಕೆರೂರ ಜಿಲ್ಲಾ ಕೋಶಾಧ್ಯಕ್ಷ, ಕೊಪ್ಪಳ ಜಿಲ್ಲಾಧ್ಯಕ್ಷರಾದ ಶರಣಗೌಡ ಪಾಟೀಲ, ಜಿಲ್ಲಾ ಯುವ ಪರಿಷತ್ ಅಧ್ಯಕ್ಷ ಶರಣು ಸಬರದ, ಮತ್ತಿತರರು ಉಪಸ್ಥಿತರಿದ್ದರು.