ಜಿಲ್ಲಾ ತಂಬಾಕು ನಿಯಂತ್ರಣಕೋಶ 57 ಕಾರ್ಯಾಚರಣೆ: ದಂಡ ವಸೂಲು

ಧಾರವಾಡ, ಮೇ.27: ಜಿಲ್ಲಾ ತಂಬಾಕು ನಿಯಂತ್ರಣಕೋಶ ಕ್ರಿಯಾಶೀಲವಾಗಿದ್ದು, ಕೋಶವು ಪೆÇಲೀಸ್ ಹಾಗೂ ಸ್ಥಳೀಯ ಸಂಸ್ಥೆಗಳ ಸಹಕಾರದಲ್ಲಿ ಪ್ರಸಕ್ತ ಸಾಲಿನಲ್ಲಿ 57 ಕಾರ್ಯಾಚರಣೆ ಕೈಗೊಂಡಿದೆ. ಕಾನೂನು ಉಲ್ಲಂಘಿಸಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ, ಸಾರ್ವಜನಿಕವಾಗಿ ಧೂಮಪಾನ ಮಾಡುವ ಪ್ರಕರಣಗಳಲ್ಲಿ ರೂ.1,35,340 ಗಳ ದಂಡ ವಸೂಲು ಮಾಡಲಾಗಿದ್ದು, ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಜಿಲ್ಲಾ ಸಮನ್ವಯ ಸಮಿತಿ ಸಭೆ ಹಾಗೂ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ಸಮನ್ವಯ ಸಮಿತಿ ರಾಷ್ಟ್ರೀಯ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಕಾರ್ಯಕ್ರಮ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕೋಟ್ಪಾ- 2003 ಕಾಯ್ದೆಯ ಪರಿಣಾಮಕಾರಿ ಅನುμÁ್ಠನಕ್ಕೆ ಕ್ರಮ ವಹಿಸಬೇಕು ಇತರ ಇಲಾಖೆಗಳ ಸಮನ್ವಯದಲ್ಲಿ ತಂಬಾಕು ಉತ್ಪನ್ನ ಮಾರಾಟ ಸ್ಥಳಗಳಿಗೆ ಅನಿರೀಕ್ಷಿತ ಭೇಟಿ, ಕಾರ್ಯಾಚರಣೆ ಮೂಲಕ ಎಚ್ಚರಿಕೆ ನೀಡಬೇಕು. ಜನಸಂದಣಿ ಹಾಗೂ ಸಮುದಾಯ ಮಟ್ಟದಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಆಯೋಜಿಸಬೇಕು ಎಂದು ಅವರು ಹೇಳಿದರು.

ಈಗಾಗಲೇ ಜಿಲ್ಲೆಯ 116 ಶಾಲೆಗಳು ತಂಬಾಕು ಮುಕ್ತವಾಗಿದ್ದು ಮತ್ತು 4 ವಿಶ್ವವಿದ್ಯಾಲಯಗಳು ತಂಬಾಕು ಮುಕ್ತವಾಗುವತ್ತ ಕ್ರಮವಹಿಸಿದ್ದು, ಶೀಘ್ರದಲ್ಲಿ ತಂಬಾಕು ಮುಕ್ತ ಕ್ಯಾಂಪಸ್ ಹೊಂದಲಿವೆ. ಇದರೊಂದಿಗೆ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜು ಆವರಣಗಳು ತಂಬಾಕು ಮುಕ್ತ ಆಗುವಂತೆ ಮಾಡಬೇಕೆಂದು ಅವರು ಹೇಳಿದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಪಾಟೀಲ್ ಶಶಿ ಅವರು ಮಾತನಾಡಿ, ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಕೋಟ್ಪಾ ಸೇರಿದಂತೆ ಎಲ್ಲ ರಾಷ್ಟ್ರೀಯ ರೋಗ ನಿಯಂತ್ರಣ ಕಾರ್ಯಕ್ರಮಗಳ ಪರಿಣಾಮಕಾರಿ ಅನುμÁ್ಠನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸಾಂಕ್ರಾಮಿಕ ರೋಗಗಳ ತಡೆಯಲು ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ನಗರ ಮತ್ತು ಗ್ರಾಮೀಣ ಭಾಗದಲ್ಲಿ ಆರೋಗ್ಯ ಇಲಾಖೆ ಎಲ್ಲ ಕಾರ್ಯಕ್ರಮಗಳನ್ನು ಜನರಿಗೆ ತಲುಪುವಂತೆ ಮತ್ತು ರೋಗಮುಕ್ತ ವಾತಾವರಣ ರೂಪಿಸಲು ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ಹಾಗೂ ಗ್ರಾಮ ಪಂಚಾಯತ್ ಮತ್ತು ನಗರ ಸಭೆಗಳು ಇನ್ನಷ್ಟು ಸಹಕಾರ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಸುಜಾತಾ ಹಸವಿಮಠ ಅವರು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ 116 ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು, 48 ಗುಂಪು ಚರ್ಚೆಗಳನ್ನು ಹಮ್ಮಿಕೊಳ್ಳಲಾಗಿದೆ. 4,970 ಜನರನ್ನು ವ್ಯಸನಮುಕ್ತಗೊಳಿಸಲಾಗಿದೆ ಎಂದು ಅವರು ತಿಳಿಸಿದರು.

ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಮೇ.31 ರಂದು “ನಮಗೆ ಆಹಾರ ಬೇಕು; ತಂಬಾಕು ಅಲ್ಲ” ಎಂಬ ಘೋಷವಾಕ್ಯದಡಿ ಜನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನ ಸಮನ್ವಯ ಸಮಿತಿ ಸಭೆ : ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಎಸ್.ಬಿ. ಕಳಸೂರಮಠ ಮಾತನಾಡಿ, ಜಿಲ್ಲೆಯಲ್ಲಿ ಕುಷ್ಟರೋಗ ನಿರ್ಮೂಲನಾ ಕಾರ್ಯಕ್ರಮದಲ್ಲಿ ಜೂನ್ 19 ರಿಂದ ಜುಲೈ 6 ರವರೆಗೆ ರಾಷ್ಟ್ರೀಯ ಕುಷ್ಠರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಾದ್ಯಂತ ಒಟ್ಟು 1,781 ತಂಡಗಳನ್ನು ರಚಿಸಿ, 21,37,184 ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 81 ಜನ ಕುಷ್ಠ ರೋಗಿಗಳಿದ್ದು, ನಿಯಮಾನುಸಾರ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಾ. ಕಳಸೂರಮಠ ತಿಳಿಸಿದರು.

ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ: ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಮಂಜುನಾಥ್ ಸೊಪ್ಪಿಮಠ ಅವರು ಮಾತನಾಡಿ, ಜನವರಿ 2023ರಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಯಾವುದೇ ಮಲೇರಿಯಾ ಪ್ರಕರಣಗಳು ವರದಿ ಆಗಿಲ್ಲ. ಆದರೆ ಹೊರ ಜಿಲ್ಲೆಗಳಿಂದ ಬಂದ ಇಬ್ಬರಿಗೆ ಜಿಲ್ಲೆಯಲ್ಲಿ ಮಲೇರಿಯಾ ಚಿಕಿತ್ಸೆ ನೀಡಲಾಗಿದೆ. ಮತ್ತು 62 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು ಚಿಕಿತ್ಸೆ ನೀಡಲಾಗಿದೆ ಎಂದರು.

ಮಳೆಗಾಲ ಆರಂಭವಾಗಿರುವುದರಿಂದ ಯಾವುದೇ ಸಾಂಕ್ರಾಮಿಕ ರೋಗಗಳು ಉಲ್ಬಣವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಪಾಗಿಂಗ್ ಮಾಡುವುದು, ಚರಂಡಿ ಸ್ವಚ್ಛತೆ, ಮಳೆ ನೀರು ನಿಲ್ಲದಂತೆ ಕ್ರಮ ವಹಿಸಲು ಸ್ಥಳೀಯ ಆಡಳಿತಗಳಿಗೆ ಸಲಹೆ, ಸಹಾರ ನೀಡಲಾಗುತ್ತದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರೇಖಾ ಡೊಳ್ಳಿನ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ತಾಲೂಲಾ ವೈದ್ಯಾಧಿಕಾರಿಗಳು, ಜಿಲ್ಲಾ ಸಮನ್ವಯ ಸಮಿತಿ ಸದಸ್ಯರು ಭಾಗವಹಿಸದ್ದರು. 
ಸಭೆಯ ನಂತರ ಜಿಲ್ಲಾಧಿಕಾರಿಗಳು ರಾಷ್ಟ್ರೀಯ ಕಾರ್ಯಕ್ರಮಗಳ ಭಿತ್ತಪತ್ರ, ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಿದರು.