ಜಿಲ್ಲಾ ಪಂಚಾಯತಿಯಲ್ಲಿ ಡಾ.ಫ.ಗು.ಹಳಕಟ್ಟಿಯವರ ಜನ್ಮ ದಿನಾಚರಣೆ

ಕಲಬುರಗಿ,ಜು.2: ರವಿವಾರ ಕಲಬುರಗಿ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ವಚನ ಪಿತಾಮಹ ಡಾ. ಫ.ಗು.ಹಳಕಟ್ಟಿರವರ ಜನ್ಮದಿನೋತ್ಸವ ನಿಮಿತ್ಯ ಅವರ ಭಾವಚಿತ್ರಕ್ಕೆ ಪೂಜೆ ಮತ್ತು ಪುಷ್ಪಾರ್ಚನೆ ಮಾಡುವ ಮೂಲಕ ಜಯಂತಿ ಆಚರಿಸಲಾಯಿತು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವಾರ್ ಸಿಂಗ್ ಮೀನಾ, ಉಪ ಕಾರ್ಯದರ್ಶಿ ಬಿ.ಎಸ್.ರಾಥೋಡ, ಸಿ.ಪಿ.ಓ ಕಿಶೋರಕುಮಾರ ದುಬೆ, ಯೋಜನಾ ನಿರ್ದೇಶಕ ಜಗದೇವಪ್ಪ, ಎ.ಓ ಅಬ್ದುಲ್ ಫಜಲ್ ಎಓ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.