ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಕಲಬುರಗಿ,ಏ.14: ಶುಕ್ರವಾರ ಇಲ್ಲಿನ ಜಿಲ್ಲಾ ಪಂಚಾಯತ ಕಚೇರಿಯಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ಜಯಂತಿ ನಿಮಿತ್ಯ ಭಾವಚಿತ್ರಕ್ಕೆ ಜಿ.ಪಂ. ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ ಅವರು ಪೂಜೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.

ಜಿಲ್ಲಾ ಪಂಚಾಯತ್ ಸಿ.ಪಿ.ಓ ಕಿಶೋರಕುಮಾರ ದುಬೆ, ಯೋಜನಾ ನಿರ್ದೇಶಕ ವಿಜಯಕುಮಾರ ಮಡ್ಡೆ, ಇ.ಓ ಮಧುಮತಿ, ಸಹಾಯಕ ಕಾರ್ಯದರ್ಶಿ ಚನ್ನಪ್ಪ,‌ ಲೆಕ್ಕಾಧಿಕಾರಿಗಳಾದ ಪವನಕುಮಾರ, ಸುನೀತಾ ಕಟಕೆ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.