ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ಮುಂದೂಡಿಕೆ

ಕಲಬುರಗಿ,ಏ.30:ಕೋವಿಡ್-19 ಸಾಂಕ್ರಾಮಿಕ ರೋಗದ ಪ್ರಕರಣಗಳು ಹೆಚ್ಚಾಗುತ್ತಿರುವ ಹಾಗೂ ರಾಜ್ಯಾದಾದ್ಯಂತ ಕೋವಿಡ್ ಕಫ್ರ್ಯೂ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ 2021ರ ಮೇ 3 ರಂದು ನಡೆಯಬೇಕಾಗಿದ್ದ ಕಲಬುರಗಿ ಜಿಲ್ಲಾ ಪಂಚಾಯತಿಯಿ 19ನೇ ಸಾಮಾನ್ಯ ಸಭೆಯನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಲಾಗಿದೆ.

ಮುಂದಿನ ಸಭೆಯ ದಿನಾಂಕವನ್ನು ನಂತರ ತಿಳಿಸಲಾಗುತ್ತದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ದಿಲೀಷ್ ಶಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.