ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ಮೇ-3ಕ್ಕೆ ಮುಂದೂಡಿಕೆ

ಕಲಬುರಗಿ.ಏ.21: ರಾಜ್ಯದಾದ್ಯಂತ ಕೋವಿಡ್-19 ಸಾಂಕ್ರಾಮಿಕ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಇದೇ ಏಪ್ರಿಲ್ 22 ರಂದು ನಡೆಯಬೇಕಾಗಿದ್ದ ಕಲಬುರಗಿ ಜಿಲ್ಲಾ ಪಂಚಾಯತಿಯಿ 19ನೇ ಸಾಮಾನ್ಯ ಸಭೆಯನ್ನು ಮೇ-3ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಷ್ ಶಶಿ ಅವರು ತಿಳಿಸಿದ್ದಾರೆ.