ಜಿಲ್ಲಾ ಬಿಜೆಪಿ ಜನ ಸೇವಕ ಸಮಾವೇಶ:ಕಾರ್ಯಕರ್ತರು ಭಾಗಿ


ದೇಶ ಕಾಂಗ್ರೆಸ್ ಮುಕ್ತವನ್ನಾಗಿಸಲು ಪಣ-ಶೆಟ್ಟರ
ರಾಯಚೂರು.ಜ.೧3- ಮುಂಬರುವ ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಮುಕ್ತವನ್ನಾಗಿ ಮಾಡಲು ಪಣ ತೊಡಬೇಕೆಂದು ಬಹೃತ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ಅವರು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದರು.
ಅವರು ನಿನ್ನೆ ನಗರದ ಹರ್ಷಿತಾ ಗಾರ್ಡನ್‌ನಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ಆಯೋಜಿಸಿದ ಜನಸೇವಕ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇತ್ತೇಚೆಗೆ ಪ್ರಕಟಗೊಂಡ ಗ್ರಾಮ ಪಂಚಾಯತಿ ಫಲಿತಾಂಶದಲ್ಲಿ ೪೫ ಸಾವಿರ ೨೪೬ ಬಿಜೆಪಿ ಬೆಂಬಲಿತ ಕಾರ್ಯಕರ್ತರು ಗೆಲುವು ಸಾಧಿಸಿದ್ದು, ೫ ಸಾವಿರದ ೬೭೦ ಪಂಚಾಯತಿಗಳಲ್ಲಿ ೩ ಸಾವಿರ ೧೪೨ ಪಂಚಾಯತಿಗಳು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಬಹುಮತ ಪಡೆದಿದೆ. ಇದರಿಂದ ಕಾಂಗ್ರೆಸ ಪಕ್ಷಕ್ಕೆ ದೊಡ್ಡ ಅಘಾತ ಸಂಭವಿಸಿದೆ ಎಂದರು.
ಗ್ರಾಮ ಪಂಚಾಯತಿಯಲ್ಲಿ ಅಧಿಕಾರ ಪಡೆದುಕೊಂಡ ಪಕ್ಷವು ಸತತ ೨೦ ವರ್ಷದ ವರೆಗೂ ತನ್ನ ಅಸ್ತಿತ್ವ ಕಳೆದುಕೊಳ್ಳುವುದಿಲ್ಲ. ಹೆಚ್ಚಾಗಿ ಗೆಲುವು ಸಾಧಿಸಿದ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆ ಗೆಲುವು ಪಡೆಯಲು ಶ್ರಮಿಸಬೇಕೆಂದು ತಿಳಿಸಿದರು.
ಪ್ರತಿಯೊಂದು ಗ್ರಾಮ ಪಂಚಾಯತಿಗಳಲ್ಲಿ ಪಕ್ಷದ ಕಾರ್ಯಕರ್ತರು ಸ್ವರಾಜ್ಯ ಸಮಾವೇಶ ನಡೆಸುವ ಮೂಲಕ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಯಿತು. ಬಿಜೆಪಿ ಪಕ್ಷವನ್ನು ಲಕ್ಷಾಂತರ ಕಾರ್ಯಕರ್ತರು ಕಟ್ಟಿ ಬೆಳೆಸಿದ್ದಾರೆ. ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಹುಲ್ ಗಾಂಧಿ ಸೇರಿದಂತೆ ಯಾರು ಸಾರಿ ಸಾಟಿಯಾಗುವುದಿಲ್ಲ ಎಂದರು.
ಈಗಾಗಲೇ ಉಪ ಚುನಾವಣೆಯಲ್ಲಿ ೧೫ ಸ್ಥಾನಗಳಲ್ಲಿ ೧೨ ಬಿಜೆಪಿ ಪಕ್ಷ ಗೆಲುವು ಹೊಂದಿತು. ಮುಂಬರುವ ಮಸ್ಕಿ , ಬಸವ ಕಲ್ಯಾಣ ಹಾಗೂ ಬೆಳಗಾವಿ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಕೆಲಸ ಕಾರ್ಯಕರ್ತರು ಮಾಡಬೇಕೆಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ ಬಿಜೆಪಿ ಬೆಂಬಲಿತ ಗೆಲುವು ಸಾಧಿಸಿದ ಮಹಿಳಾ ಅಭ್ಯರ್ಥಿಗಳು ಪ್ರತಿಯೊಂದು ಸಭೆಯಲ್ಲಿ ಭಾಗವಹಿಸುವಲ್ಲಿ ಅವರವರ ಗಂಡದಿರು ಸಹಕರಿಸಬೇಕಾಗಿದೆ. ಕೇಂದ್ರ ಹಾಗೂ ರಾಜ್ಯದ ಯೋಜನೆಗಳ ಮಾಹಿತಿ ಪಡೆಯುವ ಮೂಲಕ ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಮಾತನಾಡಿ ಮುಂಬರುವ ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಸದಸ್ಯರು ಗೆಲುವು ಸಾಧಿಸಿದ್ದು, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಪಡೆದ ಸದಸ್ಯರು ಒಂದು ಕಪ್ಪು ಚುಕ್ಕೆ ಇಲ್ಲದೆ ಅಧಿಕಾರ ಪೂರ್ಣ ಗೊಳಿಸಬೇಕು. ೭ ವಿಧಾನ ಸಭೆ ಕ್ಷೇತ್ರಗಳಲ್ಲಿ ಎಲ್ಲಾ ಸ್ಥಾನಗಳನ್ನು ಬಿಜೆಪಿಯು ವಶಕ್ಕೆ ಪಡೆಯಲಿದೆ ಎಂದರು.
ನಗರ ಶಾಸಕ ಡಾ.ಶಿವರಾಜ ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಜೆಪಿ ಬೆಂಬಲಿಗರು ಗೆಲುವು ಸಾಧಿಸಿದ್ದಾರೆ. ದೇಶ ಮುಂದವರಿಯ ಬೇಕಾದರೆ ಚುನಾವಣೆಯಲ್ಲಿ ಗೆಲುವು ಪಡೆಯಬೇಕು. ಬಿಜೆಪಿ ಕಾರ್ಯಕರ್ತರು ರಾಷ್ಟ್ರೀಯ, ರಾಜ್ಯದ ಯೋಜನೆ ಬಗ್ಗೆ ಮನೆ ಮನೆಗೆ ಹೋಗಿ ಮಾಹಿತಿ ನೀಡಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ, ಬಿಜೆಪಿ ಜಿಲ್ಲಾಧ್ಯಕ್ಷ ರಮಾನಂದ ಯಾದವ್, ಎನ್.ಶಂಕ್ರಪ್ಪ, ಪ್ರತಾಪಗೌಡ ಪಾಟೀಲ್ ಮಸ್ಕಿ, ಮಾನಪ್ಪ ವಜ್ಜಲ್, ಗಂಗಾಧರ ನಾಯಕ, ಶಿವ ಬಸಪ್ಪ ಪಾಟೀಲ್, ಜಿ.ಪಂ.ಅಧ್ಯಕ್ಷ ಆದಿಮನಿ ವೀರಲಕ್ಷ್ಮೀ, ತ್ರಿವಕ್ರಮ ಜೋಷಿ, ರವಿ ಜಲ್ದಾರ, ಕಡಗೋಳ ಅಂಜಿನ್ಯೇಯ, ಸೇರಿದಂತೆ ವಿವಿಧ ಮೋರ್ಚಗಳ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.