ಜಿಲ್ಲಾ ಬ್ರಾಹ್ಮಣ ಮಹಾಸಂಘ ಸಭೆ 4 ರಂದು

ಬೀದರ್: ಮೇ.1:ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಜಿಲ್ಲಾ ಘಟಕದ ಮಹತ್ವದ ಸಭೆ ಮೇ 4ರಂದು ಬೆಳಿಗ್ಗೆ 11 ಗಂಟೆಗೆ ಬೀದರ್ ನಗರದ ಹಳೆಯ ಆರ್ ಟಿಒ ಕಚೇರಿ ಹತ್ತಿರದ ಬಚ್ಚಾ ಲೇಔಟ್ ನಲ್ಲಿರುವ ಕೆನರಾ ಬ್ಯಾಂಕ್ ಕಟ್ಟಡದ ಮೊದಲ ಮಹಡಿಯ ಸಭಾಂಗಣದಲ್ಲಿ ಕರೆಯಲಾಗಿದೆ.

ಮೇ 7ರಂದು ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಸಮಾಜದ ಹಿತವನ್ನು ಗಮನದಲ್ಲಿಟ್ಟುಕೊಂಡು ಬ್ರಾಹ್ಮಣ ಸಮಾಜ ಕೈಗೊಳ್ಳಬೇಕಾದ ನಿಲುವು, ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ, ಸಮಾಜದ ಸಮಸ್ಯೆಗಳಿಗೆ ಸ್ಪಂದನೆ, ಸರ್ಕಾರದಿಂದಲೇ ಪರಶುರಾಮ ಜಯಂತಿ ಆಚರಣೆ ಮುಂತಾದ ಪ್ರಮುಖ ವಿಷಯಗಳ ಬಗ್ಗೆ ಮುಕ್ತವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಿದೆ. ಹೀಗಾಗಿ ಸಮಾಜದ ಮುಖಂಡರು, ಸಮಾಜದ ಹಿತದಿಂದ ದುಡಿಯುತ್ತಿರುವ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಲಹೆ-ಸೂಚನೆ ನೀಡಬೇಕು ಎಂದು ಅಖಿಲ ಭಾರತ ಬ್ರಾಹ್ಮಣ ಮಹಾಸಂಘದ ಜಿಲ್ಲಾ ಅಧ್ಯಕ್ಷ ರಮೇಶ ಕುಲಕರ್ಣಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.