ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ: ರಸ್ತೆ ಬದಿಯಲ್ಲಿ ಭಿಕ್ಷೆ ಬೇಡುವ ಮಕ್ಕಳನ್ನು ರಕ್ಷಿಸಿ ಬಾಲ ಮಂದಿರಕ್ಕೆ ದಾಖಲು

ರಾಯಚೂರು.ಜು.೧೬- ಇಲ್ಲಿಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ರಕ್ಷಣಾ ಘಟಕದ ವತಿಯಿಂದ ನಗರದ ರೈಲ್ವೆ ಸ್ಟೇಷನ್, ಬಸ್‌ಸ್ಟಾಂಡ್, ಬಸವೇಶ್ವರ ವೃತ್ತ, ಏಕ್ ಮಿನಾರ್, ತಹಶೀಲ್ದಾರ ಕಾರ್ಯಲಯ, ರಸ್ತೆ ಬದಿಯಲ್ಲಿ ಭಿಕ್ಷೆ ಬೇಡುವ ಮಕ್ಕಳನ್ನು ಹಾಗೂ ಇತರೇ ರಕ್ಷಣೆ ಮತ್ತು ಪೋಷಣೆಗೆ ಅಗತ್ಯವಿರುವ ಮಕ್ಕಳನ್ನು ರಕ್ಷಿಸಲು ಹಠಾತ್ ದಾಳಿ ಮಾಡಿ ಮಕ್ಕಳನ್ನು ರಕ್ಷಿಸಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ, ಬಾಲಮಂದಿರಕ್ಕೆ ದಾಖಲಿಸಲಾಗಿದೆ.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನ್ಸೂರ್ ಅಹ್ಮದ್.ಜಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ಎಸ್‌ಜೆಪಿಯು ಘಟಕ, ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು, ಪಶ್ಚಿಮ ಪೊಲೀಸ್ ಠಾಣೆ, ಸದರ್ ಬಜಾರ್ ಪೊಲೀಸ್ ಠಾಣೆಯ ಸಿಬ್ಬಂದಿಗಳ ತಂಡ ಹಠಾತ್ ದಾಳಿಯಲ್ಲಿ ಪಾಲ್ಗೊಂಡು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನ್ಸೂರ್ ಅಹ್ಮದ್.ಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.