ಜಿಲ್ಲಾ ಮಟ್ಟಕ್ಕೆ ಆಯ್ಕೆ

ಔರಾದ : ಸೆ.19:ಪಟ್ಟಣದ ಅಮರೇಶ್ವರ ಗುರುಕುಲ್ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು 200ಮೀ ಓಟ ಮತ್ತು ್ಠ4100ರೀಲೆ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ, ಮಕ್ಕಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಬಸವರಾಜ ಶೆಟಕಾರ ಮುಖ್ಯ ಶಿಕ್ಷಕಿ ಶಿಲ್ಪಾ ಶೆಟಕಾರ ಹಾಗೂ ದೈಹಿಕ ಶಿಕ್ಷಕ ಮಹೇಂದ್ರಸಿಂಗ ಪಾಟೀಲ ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.