ಜಿಲ್ಲಾ ಮಟ್ಟಕ್ಕೆ ಆಯ್ಕೆ

(ಸಂಜೆವಾಣಿ ವಾರ್ತೆ)
ನವಲಗುಂದ,ಸೆ22 : ತಾಲ್ಲೂಕಾ ಮಟ್ಟದ ಪ್ರಾಥಮಿಕ ವಿಭಾಗದ ಖೋ-ಖೋ ಪಂದ್ಯಾವಳಿಯು ಎಚ್.ಪಿ.ಎಸ್ ಜಾವೂರ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ. ಪಟ್ಟಣದ ಬಸವೇಶ್ವರ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ-6 ವಿದ್ಯಾರ್ಥಿಗಳು ಖೋ-ಖೋ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ. ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಧಾರವಾಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲೆಯ ಪ್ರಧಾನ ಗುರುಗಳು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು. ಹಾಗೂ ಸಹ ಶಿಕ್ಷಕರು/ ಶಿಕ್ಷಕಿಯರು. ಎಸ್ .ಡಿ.ಎಮ್ .ಸಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು. ಬಸವೇಶ್ವರನಗರದ ಗುರು ಹಿರಿಯರು ಯುವಕರು. ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿನಿಯರಿಗೆ ಅಭಿನಂದಿಸಿರುತ್ತಾರೆ