ಜಿಲ್ಲಾ ಮಟ್ಟದ ಕ್ರೀಡಾ ಕೂಟ: ವಿ. ವಿ. ಎನ್ ಶಾಲೆ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

ಕಲಬುರಗಿ:ಆ.29: ಶಿಕ್ಷಣ ಇಲಾಖೆ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ವಿವೇಕಾನಂದ ವಿದ್ಯಾ ನಿಕೇತನ ಶಾಲೆಯ ವಿದ್ಯಾರ್ಥಿ ಮಲ್ಲಿಕಾರ್ಜುನ ಗೌರಿಶಂಕರ ಕರಾಟೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದನು. ಶಾಲೆಯ ಪ್ರಿನ್ಸಿಪಾಲ ಸಿದ್ದಪ್ಪ ಭಗವತಿ ಹಾಗೂ ಶಿಕ್ಷಕರು ವಿದ್ಯಾರ್ಥಿಯ ಈ ಸಾಧನೆಗೆ ಮೆಚ್ಚುಗೆ ಸೂಚಿಸಿದ್ದಾರೆ.