ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ: ಉತ್ತಮ ಸಾಧನೆ ಚೈತ್ರಾ ರಾಜ್ಯಮಟ್ಟಕ್ಕೆ


ಪುತ್ತೂರು, ಮಾ.೧೬- ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕಕ್ಕೆಪದವಿನ ಎಲ್ಸಿಆರ್ ಇಂಡಿಯನ್ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರತಿನಿಧಿಸಿದ ತಂಡ ಪ್ರಥಮ ಸ್ಥಾನ ಗಳಿಸಿದೆ. ಈ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡಿದ ಬಂಟ್ವಾಳ ತಾಲೂಕಿನ ಪೆರ್ನೆಯ ಕೃಷ್ಣಪ್ಪ ಪೂಜಾರಿ ಮತ್ತು ಸುನಿತಾ ದಂಪತಿಯ ಪುತ್ರಿಯಾಗಿರುವ ಚೈತ್ರಾ ಅವರು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಸೃಜನಾ, ಕಲಾ ವಿಭಾಗದ ಚೈತ್ರಾ, ಮತ್ತು ವಿಜ್ಞಾನ ವಿಭಾಗದ ವಿದ್ಯಾ ಇವರು ಪುತ್ತೂರು ತಾಲೂಕು ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಕಾಲೇಜಿನ ದೈಹಿಕ
ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ| ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಈ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದಿರುತ್ತಾರೆ.