ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

ಗದಗ,ಸೆ.15:ಸಂಸ್ಕೃತಿಯ ಜೊತೆ ಜೊತೆಗೆ ಬೆಳೆದು ಬಂದಂತಹ ಕ್ರೀಡೆಗಳು ದೈಹಿಕ ಶ್ರಮ, ಮನರಂಜನೆ, ಮಾನಸಿಕ ಚಟುವಟಿಕೆ, ಬಲಾಡ್ಯತೆ, ಸಂಘಟನಾ ಮನೋಭಾವಕ್ಕೆ ಹೆಬ್ಬಾಗಿಲಾಗಿದೆ ಎಂದು ಗದಗ-ಬೆಟಗರಿ ನಗರ ಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ನುಡಿದರು.
ಬುಧವಾರ ನಗರದ ಕೆ.ಎಚ್.ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ದೈಹಿಕ ಮತ್ತು ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಕ್ರೀಡೆಗಳು ಸಹಕಾರಿಯಾಗಿದ್ದು ಪ್ರತಿಯೊಬ್ಬರೂ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಆರೋಗ್ಯ ಭರಿತ ಜೀವನ ನಡೆಸಬೇಕು ಎಂದು ಉಪಾಧ್ಯಕ್ಷೆ ಸುನಂದಾ ಬಾಕಳೆ ನುಡಿದರು.
ಕಾಂiÀರ್iಕ್ರಮದ ಅಧ್ಯಕ್ಷತೆ ವಹಿಸಿದ್ದ ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ ಅವರು ಮಾತನಾಡಿ ಕ್ರೀಡೆ ಇಲ್ಲದವನ ಜೀವನ ಕೀಡೆ ತಿಂದ ಹಣ್ಣಿನಂತೆ ಎಂಬ ನಾಣ್ಣುಡಿಯಂತೆ ಮಾನಸಿಕ, ದೈಹಿಕ ಶಕ್ತಿ ವೃದ್ಧಿಗೆ ಕ್ರೀಡೆಗಳು ತುಂಬಾ ಸಹಕಾರಿಯಾಗಿವೆ. ಕ್ರೀಡೆಯು ಭಾರತೀಯ ಪರಂಪರೆಯಾಗಿದ್ದು ಅನಾದಿ ಕಾಲದಿಂದಲೂ ಅನೇಕ ದೇಶಿ ಕ್ರೀಡೆಗಳು ಪ್ರಚಲಿತದಲ್ಲಿವೆ. ಕ್ರೀಡೆ ಎಂಬುವುದು ಸಂಘಟಿತ, ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ಒಂದು ದೈಹಿಕ ಚಟುವಟಿಕೆಯಾಗಿದೆ.
ಪ್ರತಿಯೊಂದು ಕ್ರೀಡೆಯಲ್ಲೂ ಆ ತಂಡದಲ್ಲಿರುವ ಕ್ರೀಡಾಪಟುಗಳ ದೈಹಿಕ ಸಾಮರ್ಥ್ಯ ಮತ್ತು ಕೌಶಲ್ಯದಿಂದ ಸೋಲು ಗೆಲುವು ನಿರ್ಧರಿತವಾಗುತ್ತದೆ. ಆಟದಲ್ಲಿ ಸೋಲು ಗೆಲುವು ಸಾಮಾನ್ಯವಾಗಿದ್ದು ಕ್ರೀಡಾಪಟುಗಳು ಅವೆಲ್ಲವನ್ನೂ ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು. ಪ್ರಸ್ತುತ ದಿನಗಳಲ್ಲಿ ಕ್ರೀಡೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಪೆÇ?ರೀತ್ಸಾಹ ನೀಡುತ್ತಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಕ್ರೀಡಾ ಕ್ಷೇತ್ರದಲ್ಲಿ ಜಿಲ್ಲೆಯಿಂದ ಅನೇಕ ಪ್ರತಿಭೆಗಳು ಅನಾವರಣಗೊಂಡಿದ್ದು ಅಂತಹ ಪ್ರತಿಭೆಗಳನ್ನು ಮಾದರಿಯನ್ನಾಗಿಟ್ಟುಕೊಂಡು ಇಂದಿನ ಯುವ ಕ್ರೀಡಾಪಟುಗಳು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆಗೈಯ್ಯುವ ಮೂಲಕ ರಾಜ್ಯ ರಾಷ್ಟ್ರಮಟ್ಟದಲ್ಲಿ ಜಿಲ್ಲೆಯ ಕೀರ್ತಿ ಪತಾಕೆಯನ್ನು ಹಾರಿಸುವಂತೆ ಉಷಾ ದಾಸರ ಕರೇ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಯುವಜನ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ರವಿಕಾಂತ ಅಂಗಡಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಕ್ರೀಡಾಪಟುಗಳು ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ ಸರ್ವರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಭೋಧಿಸಲಾಯಿತು.