
ಸಂಜೆವಾಣಿ ವಾರ್ತೆ
ದಾವಣಗೆರೆ; ಜುಲೈ. 14: ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರಿಗೆ ನೀಡುವ ಪೌಷ್ಠಿಕ ಆಹಾರದ ಕೊರತೆಯಾಗದಂತೆ ನೋಡಿಕೊಳ್ಳವುಂತೆ ಕೈಗಾರಿಕಾಭಿವೃದ್ಧಿ ಆಯುಕ್ತರು ಮತ್ತು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಅವರು ತಿಳಿಸಿದರು.ಜಿಲ್ಲಾ ಪಂಚಾಯತ್ ಕಚೇರಿ ಮುಖ್ಯ ಸಭಾಂಗಣದಲ್ಲಿ ಜರುಗಿದ ಪ್ರಗತಿ ಪರಿಶೀಲನಾ ಸಭೆ ಹಾಗೂ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರಿಗೆ ಪೌಷ್ಠಿಕ ಆಹಾರದ ಅಗತ್ಯ ಹೆಚ್ಚಾಗಿದ್ದು, ಅವರಿಗೆ ಕೊರತೆ ಬಾರದಂತೆ ಹಾಗೂ ಆರೋಗ್ಯದಲ್ಲಿ ಏರುಪೇರು ಉಂಟಾದಲ್ಲಿ ತುರ್ತಾಗಿ ಆರೋಗ್ಯ ಸೌಲಭ್ಯ ಒದಗಿಸುವಂತೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಮತ್ತು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಚಿಕನ್ ಗುನ್ಯಾ ಮತ್ತು ಡೇಂಗ್ಯು ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಮನೆ-ಮನೆಗೂ ತೆರಳಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಅರಿವು ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದರು.ರಾಜ್ಯ ಸರ್ಕಾರದ ಶಕ್ತಿ ಯೋಜನೆಯು ಮಹಿಳೆಯರಿಗೆ ಉಪಯುಕ್ತವಾಗಿದ್ದು, ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ವ್ಯವಸ್ಥಿತ ರೀತಿಯಲ್ಲಿ ಬಸ್‍ಗಳ ವ್ಯವಸ್ಥೆ ಮಾಡಬೇಕು ಎಂದರು.