
ಕಲಬುರಗಿ,ಮಾ.14:ಕೇಂದ್ರ ಸರ್ಕಾರದ ಪ್ರಾಯೋಜಿತ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಆಧಾರಿತ ವಿವಿಧ ಯೋಜನೆಗಳಡಿ ಆಯ್ಕೆಯಾದ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮ್ಮೇಳನÀವನ್ನು ಇದೇ ಮಾರ್ಚ್ 15 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ (ಪರೀಕ್ಷಾ ವಿಭಾಗದ ಬಲಭಾಗ) ಆವರಣದಲ್ಲಿ ಏರ್ಪಡಿಸಲಾಗಿದೆ.
ಕೇಂದ್ರದ ನಾಗರಿಕ ವಿಮಾನಯಾನ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ರಾಜ್ಯ ಸಚಿವರಾದ ಡಾ.ವಿ.ಕೆ. ಸಿಂಗ್ ಹಾಗೂ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಮುರುಗೇಶ ಆರ್. ನಿರಾಣಿ ಅವರು ಜಿಲ್ಲಾ ಮಟ್ಟದ ಫಲಾನುಭವಿಗಳ ಸಮ್ಮೇಳನವನ್ನು ಉದ್ಘಾಟಿಸುವರು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಹಾಗೂ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಹಾಗೂ ಬೀದರ ಸಂಸದರಾದ ಭಗವಂತ ಖೂಬಾ ಘನ ಉಪಸ್ಥಿತಿ ವಹಿಸುವರು. ಕಲಬುರಗಿ (ಗ್ರಾಮೀಣ) ಶಾಸಕ ಬಸವರಾಜ ಮತ್ತಿಮಡು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.
ಜೇವರ್ಗಿ ಶಾಸಕರು ಹಾಗೂ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯಸಿಂಗ್, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ ಪಾಟೀಲ್ ಸೇಡಂ, ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ. ಪಾಟೀಲ ರೇವೂರ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ-ಯಾದಗಿರಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರು ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಶಾಸಕರು ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಹಾಗೂ ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಿ. ಜಾಧವ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
ವಿಧಾನಸಭೆ ಶಾಸಕರುಗಳಾದ ಪ್ರಿಯಾಂಕ ಖರ್ಗೆ, ಎಂ.ವೈ.ಪಾಟೀಲ, ಸುಭಾಷ ಆರ್. ಗುತ್ತೇದಾರ, ಖನೀಜ್ ಫಾತೀಮಾ, ಡಾ. ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ಸಾಬಣ್ಣ ತಳವಾರ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದ್ರಕಾಂತ ಜಿ. ಪಾಟೀಲ (ಚಂದು ಪಾಟೀಲ), ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಧರ್ಮಣ್ಣ ದೊಡ್ಡಮನಿ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ವಿದ್ಯಾಸಾಗರ ವಿ. ಶಹಾಬಾದಿ, ಕಲಬುರಗಿ ನೀರಾವರಿ ಯೋಜನೆಗಳ ವಲಯದ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹರ್ಷವರ್ಧನ್ ಗುಂಡಪ್ಪ ಗುಗಳೆ ಹಾಗೂ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅವಿನಾಶ ಕುಲಕರ್ಣಿ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.