ಜಿಲ್ಲಾ ಮಟ್ಟದ ಬಾಲ್‍ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆ

ಬೀದರ :ಸೆ.5:ಜಿಲ್ಲಾ ನೆಹರು ಕ್ರಿಡಾಂಗಣದಲ್ಲಿ ನಡೆದ 2022-23ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ನಮ್ಮ ಬಸವತೀರ್ಥ ವಿದ್ಯಾಪೀಠ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕೀಯರ ಬಾಲ್‍ಬ್ಯಾಡ್ಮಿಂಟನ್ ತಂಡಗಳು ಭಾಗವಹಿಸಿ ಪ್ರೌಢಶಾಲಾ ಬಾಲಕರ ತಂಡವು ಜಿಲ್ಲಾ ಮಟ್ಟಕ್ಕೆ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ ಹಾಗೂ ಬಾಲಕೀಯರ ತಂಡವು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿರುತ್ತದೆ.

ಅದರಂತೆ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿರುತ್ತದೆ. ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ತಂಡದ ವ್ಯವಸ್ಥಾಪಕರಾದÀ ಶ್ರೀಮತಿ ಚಂದ್ರಕಲಾ ದೊಟಿಕೊಳ ಹಾಗೂ ತಂಡದ ತರಬೇತುದಾರರಾದ ಶ್ರೀ ಈರಣ್ಣಾ ಜೋತಗೊಂಡ ಇವರಿಗೆ ಬಸವತೀರ್ಥ ವಿದ್ಯಾಪೀಠ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಶ್ರೀ ಕೇಶವರಾವ ತಳಘಟಕರ್, ಹಳ್ಳಿಖೇಡ(ಬಿ) ಶಾಲಾ/ಕಾಲೇಜಿನ ಆಡಳಿತಾಧಿಕಾರಿಗಳಾದ ಶ್ರೀ ಗುಂಡಯ್ಯಾ ತೀರ್ಥಾ, ಶಾಲಾ ಮತ್ತು ಕಾಲೇಜಿನ ಮುಖ್ಯಸ್ಥರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.