
ಸಂಜೆವಾಣಿ ವಾರ್ತೆ
ಹಗರಿಬೊಮ್ಮನಹಳ್ಳಿ. ಸೆ.02 ಮಕ್ಕಳು ಪಠ್ಯದ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಿದರೆ ದೈಹಿಕ ಬೆಳವಣಿಗೆಯಾಗುತ್ತದೆ ಎಂದು ಶಾಸಕ ಕೆ ನೇಮಿರಾಜ್ ನಾಯ್ಕ್ ಹೇಳಿದರು.
ತಾಲೂಕಿನ ಗೆದ್ದಿಕೇರಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಜಿಲ್ಲಾ ಮಟ್ಟದ ವಾಲಿಬಾಲ್ ಕ್ರೀಡಾಕೂಟವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಈಗಿನ ಮಕ್ಕಳಲ್ಲಿ ದೈಹಿಕ ಚಟುವಟಿಕೆ ಕುಂಠಿತವಾಗಿದೆ. ಮಕ್ಕಳು ಬರೆ ಓದುವ ಕಡೆ ಆಸಕ್ತಿ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಕ್ರೀಡಾಭಿಮಾನ ಬೆಳೆಸಿಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾಗಿದೆ ಎಂದರು.
ಜಿಲ್ಲೆಯ ಐದು ತಾಲೂಕುಗಳಿಂದ 250ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ನಂದಿಪುರ ಮಹೇಶ್ವರ ಸ್ವಾಮೀಜಿ, ಚರಂತೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಬಿಇಒ ಮೈಲೇಶ್ ಬೇವೂರ್, ಅಕ್ಷರ ದಾಸೋಹದ ಡಿ ರವಿ ನಾಯ್ಕ್, ಕ್ಷೇತ್ರ ಸಮನ್ವಯ ಅಧಿಕಾರಿ ಎಂ ಎಸ್ ಪ್ರಭಾಕರ, ದೈಹಿಕ ಪರಿವೀಕ್ಷಕ ಸಿ ಕೊಟ್ರೇಶ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರವಿಚಂದ್ರ ನಾಯ್ಕ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣ ನಾಯ್ಕ್, ಇತರರಿದ್ದರು
One attachment • Scanned by Gmail