ಜಿಲ್ಲಾ ಮಟ್ಟದ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಜ.17: ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ವಿಜಯನಗರ ಜಿಲ್ಲಾ ಘಟಕ ವತಿಯಿಂದ ಈ ದೇಶದ ಮಹಾನ್ ಕ್ರಾಂತಿಕಾರಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ವರ್ಷಾಚರಣೆಯ ಅಂಗವಾಗಿ ರಾಜ್ಯ ಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹೊಸಪೇಟೆಯ ಕೆ.ಎಸ್.ಪಿ.ಎಲ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗುತ್ತು. ಈ ಕಾರ್ಯಕ್ರವನ್ನು ಡಾಕ್ಟರ್ ಮಲ್ಲಿಕಾರ್ಜುನ ಕೆಂಚ ರೆಡ್ಡಿ ಅವರು ಉದ್ಘಾಟಿಸಿದರು. ಹಾಗೂ ಅತಿಥಿಗಳಾಗಿ ಕಾಲೇಜಿನ ಪ್ರಾಂಶುಪಾಲರಾದ ಮೌಲಾ ಹುಸೇನ್ ಅವರು ವೇದಿಕೆ ಮೇಲೆ ಉಪಸ್ಥಿತರಿದ್ದರು.
ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ  ಡಾಕ್ಟರ್ ಮಲ್ಲಿಕಾರ್ಜುನ ಕೆಂಚ ರೆಡ್ಡಿ ಅವರು ನೇತಾಜಿ ಅವರ ಕುರಿತು ಸ್ಪೂರ್ತಿದಾಯಕವಾಗಿ ಮಾತಾನಾಡಿ ನೇತಾಜಿ ಅವರ ವಿಚಾರ ಮತ್ತು ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು, ನೇತಾಜಿಯವರಂತಹ ಕ್ರಾಂತಿಕಾರಿಗಳ ಹೋರಾಟದ ಪ್ರತಿಫಲದಿಂದ ನಾವು ಇಂದು ಸ್ವಾತಂತ್ರ‍್ಯರಾಗಿ ಜೀವಿಸುತ್ತಿದ್ದವೆ… ಎಂದು   ಹೇಳಿ, ಸ್ಪರ್ಧೆಗಳಲ್ಲಿ ಭಾಗವಹಿಸಲು ನೆರೆದಿದ್ದ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.
ಈ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಎಐಡಿಎಸ್ಓ ರಾಜ್ಯ ಸೆಕ್ರೆಟರಿಯೇಟ್ ಸದಸ್ಯರು ರವಿಕಿರಣ್.ಜೆ.ಪಿ ಅವರು ಮಾತನಾಡಿ… ಈ ಸ್ಪರ್ಧೆಗಳಲ್ಲಿ ವಿವಿಧ ಶಾಲಾ -ಕಾಲೇಜಿನ ಹಾಗೂ ತಾಲೂಕುಗಳಿಂದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಗಳು ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಒಂದು ಒಳ್ಳೆಯ ಉನ್ನತ ನೀತಿ -ನೈತಿಕತೆಯನ್ನು ಬೇಳೆಸುವುದು ಹಾಗೂ ನೇತಾಜಿ ಅವರ ಕುರಿತು ಎಲ್ಲಾ ವಿದ್ಯಾರ್ಥಿ ಸಮುದಾಯಕ್ಕೆ ಸರಿಯಾದ ವಿಚಾರ ತಲುಪಲಿ ಎನ್ನುವ ಆಶಯ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಐಡಿಎಸ್‌ಓ ಸದಸ್ಯರು ಎಮ್.ಶಾಂತಿ ವಹಿಸಿದ್ದರು. ಈ ಸಂದರ್ಭದಲ್ಲಿ ಎಐಡಿಎಸ್ಓ ಸದಸ್ಯರು ಅನುಪಮಾ, ನಟರಾಜ್, ವಿದ್ಯಾರ್ಥಿಗಳು, ಮುಂತಾದವರು ಭಾಗವಹಿಸಿದ್ದರು.