ಜಿಲ್ಲಾ ವರದಿಗಾರ ಕೂಟದ ಸದಸ್ಯರಿಗೆ ಕ್ರಿಕೆಟ್ ಪಂದ್ಯಾವಳಿ

ಸಂಜೆವಾಣಿ ವಾರ್ತೆ

ದಾವಣಗೆರೆ.ಜು.೨: ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ವತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ನಗರದ  ಡಿಎಆರ್ ಪೊಲೀಸ್ ಮೈದಾನದಲ್ಲಿ ದಾವಣಗೆರೆ ಜಿಲ್ಲಾ ವರದಿಗಾರ ಕೂಟದ ಸದಸ್ಯರಿಗೆ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.ವರದಿಗಾರ ಸದಸ್ಯರಲ್ಲೇ ಒಟ್ಟು 4 ತಂಡಗಳನ್ನು ರಚಿಸಲಾಗಿತ್ತು.‌ ಪ್ರತಿ ತಂಡದಲ್ಲಿ 16 ಸದಸ್ಯರು ಇದ್ದರು. ಪ್ರತಿ ಆಟಕ್ಕೆ 5 ಓವರ್ ನಿಗಧಿ ಮಾಡಲಾಗಿತ್ತು. ಲೀಗ್ ಮಾದರಿಯಲ್ಲಿ ಪಂದ್ಯಾವಳಿ ನಡೆಸಲಾಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್, ಉಪಾಧೀಕ್ಷ ಪ್ರಕಾಶ್ ಪಂದ್ಯಾವಳಿ ನಡೆಯುತ್ತಿದ್ದ ಅಗಮಿಸಿ ಶುಭ ಕೋರಿದರು.ಈ ವೇಳೆ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ‌ ಕೆ.ಏಕಾಂತಪ್ಪ, ಕಾರ್ಯನಿರತ ಪತ್ರಕರ್ತರ ಸಂಘದ ದಾವಣಗೆರೆ ಜಿಲ್ಲಾಧ್ಯಕ್ಷ ಏಕಭೋಟೆ ಮಂಜುನಾಥ್ ಸೇರಿದಂತೆ ‌ಇತರರು ಇದ್ದರು. ಪಂದ್ಯಗಳನ್ನು ವೀಕ್ಷಿಸಲು ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ದಾವಣಗೆರೆ ಜಿಲ್ಲಾ ವರದಿಗಾರರ ಕೂಟ, ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಹಿರಿಯರು ಸೇರಿದಂತೆ ಎಲ್ಲಾ ಸದಸ್ಯರು ಇದ್ದರು.